ರಾಜ್ಯ ಸರಕಾರಿ ನೌಕರರಿಗೆ ತುಟ್ಟಿಭತ್ತೆ ಹೆಚ್ಚಳ

Update: 2021-07-26 13:46 GMT

ಬೆಂಗಳೂರು, ಜು. 26: ರಾಜ್ಯ ಸರಕಾರಿ ನೌಕರರಿಗೆ 2021ರ ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ 2018ರ ಪರಿಷ್ಕøತ ವೇತನ ಶ್ರೇಣಿಯಲ್ಲಿ ನೀಡಲಾಗುವ ತುಟ್ಟಿಭತ್ತೆಯನ್ನು ಶೇ.11.25ರಿಂದ ಶೇ.21.50ಕ್ಕೆ ಪರಿಷ್ಕರಿಸಿ(ಹೆಚ್ಚಿಸಿ) ಸೋಮವಾರ ಆರ್ಥಿಕ ಇಲಾಖೆ ಸರಕಾರದ ಉಪ ಕಾರ್ಯದರ್ಶಿ ಕೆ.ಉಮಾ ಆದೇಶ ಹೊರಡಿಸಿದ್ದಾರೆ.

ರಾಜ್ಯ ಸರಕಾರಿ ನೌಕರರು ಸೇರಿದಂತೆ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನದಾರರಿಗೆ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ/ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿದ್ದ ನಿವೃತ್ತ ನೌಕರರಿಗೂ ಈ ಆದೇಶ ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News