ಅನ್‌ಲಾಕ್ : ಮತ್ತಷ್ಟು ಚಟುವಟಿಕೆಗೆ ದ.ಕ. ಜಿಲ್ಲಾಧಿಕಾರಿ ಅನುಮತಿ
Update: 2021-07-26 19:41 IST
ಮಂಗಳೂರು, ಜು.26: ಧಾರ್ಮಿಕ ಸ್ಥಳಗಳನ್ನು ತೆರೆಯಲು ಈಗಾಗಲೇ ಅನುಮತಿಸಲಾಗಿದೆ. ಆದರೆ, ಜಾತ್ರೆ, ದೇವಾಲಯ ಉತ್ಸವ, ಮೆರವಣಿಗೆ, ಸಭೆಗಳನ್ನು ನಡೆಸಲು ಅನುಮತಿಸಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ಕೋವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 2020ರ ನ.12ರಂದು ಹೊರಡಿಸಲಾದ ಸುತ್ತೋಲೆಯಲ್ಲಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಅಮ್ಯೂಸ್ ಮೆಂಟ್ ಪಾರ್ಕ್ ಮತ್ತು ಅಂತಹ ಇತರ ಸ್ಥಳಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಈ ಪೈಕಿ ಜಲ ಕ್ರೀಡೆ ಅಥವಾ ಜಲ ಸಂಬಂಧಿತ ಸಾಹಸ ಚಟುವಟಿಕೆಗಳಿಗೆ ಅನುಮತಿ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.