ಬೆಂಗಳೂರು: ಯುವಕನ ಕೊಲೆ

Update: 2021-07-26 14:55 GMT

ಬೆಂಗಳೂರು, ಜು.26: ರೈಲ್ವೆ ಹಳಿ ಮೇಲೆ ಯುವಕನ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಕಂಟೋನ್ಮೆಂಟ್ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿ.ಚನ್ನಸಂದ್ರ ರೈಲ್ವೆ ನಿಲ್ದಾಣ ಸಮೀಪದ ರೈಲ್ವೆ ಹಳಿ ಮೇಲೆ ಯುವಕನ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯವೆಸಗಿರಬಹುದೆಂಬ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಸುಮಾರು 25ರಿಂದ 30 ವರ್ಷದಂತೆ ಕಾಣುವ ಈ ಯುವಕನ ಹೆಸರು, ವಿಳಾಸ ಸದ್ಯಕ್ಕೆ ತಿಳಿದು ಬಂದಿಲ್ಲ. ಘಟನೆ ಸಂಬಂಧ ರಾಮಮೂರ್ತಿನಗರ ಠಾಣೆ ಪೊಲೀಸರು ಮತ್ತು ಕಂಟೋನ್ಮೆಂಟ್ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News