ಪಿಯುಸಿ: ಸಾಲಿಹಾತ್‌ನಲ್ಲಿ ಉತ್ತಮ ಫಲಿತಾಂಶ

Update: 2021-07-26 15:21 GMT

ಉಡುಪಿ, ಜು.26: 2020-21ನೆ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತೋನ್ಸೆ ಹೂಡೆಯ ಸಾಲಿಹಾತ್ ಬಾಲಕೀಯರ ಪದವಿ ಪೂರ್ವ ಕಾಲೇಜಿನ 15 ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 20 ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ, ಒಬ್ಬರು ದ್ವಿತೀಯ ಸ್ಥಾನದಲ್ಲಿ ತೇರ್ಗಡೆ ಹೊಂದಿದ್ದಾರೆ.

ವಿಜ್ಞಾನ ವಿಭಾಗದ ಸುಮಯ್ಯ 600ರಲ್ಲಿ 599 ಅಂಕ, ವಾಣಿಜ್ಯ ವಿಭಾಗದ ಹಮ್ರಾ 600 ರಲ್ಲಿ 597 ಅಂಕ ಪಡೆದಿದ್ದಾರೆ. ಪರೀಕ್ಷೆ ಬರೆದ ಎಲ್ಲಾ 36 ವಿದ್ಯಾರ್ಥಿಗಳು ಉತ್ತೀರ್ಣ ಹೊಂದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News