ದ.ಕ. ಜಿಲ್ಲೆ : ಕೋವಿಡ್ ಗೆ ನಾಲ್ವರು ಬಲಿ ; 357 ಮಂದಿಗೆ ಕೊರೋನ ಸೋಂಕು

Update: 2021-07-26 15:55 GMT

ಮಂಗಳೂರು, ಜು. 26: ದ.ಕ. ಜಿಲ್ಲೆಯಲ್ಲಿ ಕೋವಿಡ್‌ಗೆ ಸೋಮವಾರ ನಾಲ್ವರು ಮೃತಪಟ್ಟಿದ್ದು, ಹೊಸದಾಗಿ 357 ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಜಿಲ್ಲೆಯಲ್ಲಿ 205 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಶೇ. 2.92 ಪಾಸಿಟಿವಿಟಿ ದರವಿದೆ. ಕೋವಿಡ್‌ ನಿಂದಾಗಿ ಜಿಲ್ಲೆಯಲ್ಲಿ ಒಟ್ಟು 1,397 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 98,680 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 95,125 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2,158 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News