ಹಿಂದೂ ದೇಗುಲದ ಹಣ ಅನ್ಯ ಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ: ಸರಕಾರದಿಂದ ಅಧಿಕೃತ ಆದೇಶ

Update: 2021-07-26 16:56 GMT

ಬೆಂಗಳೂರು, ಜು.26: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಆದೇಶದಂತೆ ದೇವಸ್ಥಾನಗಳು ಹಾಗೂ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಹಣವನ್ನು ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ನೀಡುವುದಕ್ಕೆ ತಡೆ ನೀಡಿ ರಾಜ್ಯ ಸರಕಾರ ಅಧಿಕೃತ ಆದೇಶ ಹೊರಡಿಸಿದೆ. 

ಅನ್ಯಮತೀಯ ಪ್ರಾರ್ಥನ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಕುರಿತು ಎದ್ದಿರುವ ಚರ್ಚೆಯ ಕುರಿತು ಸರಕಾರ ಅಂತಿಮ ತೀರ್ಮಾನ ಕೈಗೊಂಡಿದ್ದು, ರಾಜ್ಯದ 757 ಪ್ರಾರ್ಥನ ಕೇಂದ್ರಗಳಿಗೆ ಹಾಗೂ 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನ ಕೇಂದ್ರಗಳಿಗೆ ಸರಕಾರ ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ನೀಡುತ್ತಿದ್ದ ಅನುದಾನ ತಡೆ ಹಿಡಿದಿದ್ದು, ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ. 

ಇನಾಂ ರದ್ದತಿ ಕಾಯ್ದೆ 1977ರ ಪರಿಹಾರಾರ್ಥವಾಗಿ ನೀಡುತ್ತಿರುವ ತಸ್ತಿಕ್ ಮತ್ತು ವರ್ಷಾಸನವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ದೇವಸ್ಥಾನಗಳಿಂದ ನೀಡುವ ಬದಲು, ಇನ್ನು ಮುಂದೆ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಮೂಲಕ ತಸ್ತಿಕ್ ಮತ್ತು ವರ್ಷಾಸನ ನೀಡಲು ಅನುದಾನ ಬಿಡುಗಡೆ ಮಾಡತಕ್ಕದ್ದು ಎಂದು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವರದಿಯನ್ನಾದರಿಸಿ ಸರಕಾರ ಆದೇಶ ನೀಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News