ಇಸ್ರೊ ಬೇಹುಗಾರಿಕೆ ಪ್ರಕರಣ: ತನಿಖೆ ಮುಂದುವರಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚನೆ

Update: 2021-07-26 18:03 GMT

ಹೊಸದಿಲ್ಲಿ, ಜು. 26: 1994ರ ಬೇಹುಗಾರಿಕೆ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ಲೋಪದ ಕುರಿತು ಮೊಕದ್ದಮೆ ದಾಖಲಿಸಲು ಮಾಜಿ ನ್ಯಾಯಮೂರ್ತಿ (ನಿವೃತ್ತ) ಡಿ.ಕೆ. ಜೈನ್ ಅವರ ನೇತೃತ್ವದ ಸಮಿತಿ ಸಲ್ಲಿಸಿದ ವರದಿ ಆಧಾರವಾಗುವುದಿಲ್ಲ. ದಾಖಲಿಸಲಾದ ಎಫ್ಐಆರ್ನ ಬಗ್ಗೆ ಸಿಬಿಎ ತನಿಖೆ ನಡೆಸಬೇಕು ಹಾಗೂ ಸಾಕ್ಷಗಳನ್ನು ಸಂಗ್ರಹಿಸಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

 ಈ ಪ್ರಕರಣದಲ್ಲಿ ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ (79) ಅವರನ್ನು ಸುಪ್ರೀಂ ಕೋರ್ಟ್ ಖುಲಾಸೆಗೊಳಿಸಿತ್ತು ಹಾಗೂ ಅವರಿಗೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೇರಳ ಸರಕಾರಕ್ಕೆ ನಿರ್ದೇಶಿಸಿತ್ತು.

ಈ ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸಬೇಕು ಹಾಗೂ ಕಾನೂನಿನಂತೆ ಮುಂದುವರಿಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕೇವಲ ವರದಿ ಆಧಾರದಲ್ಲಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ತನಿಖೆ ನಡೆಸಬೇಕು, ಸಾಕ್ಷಗಳನ್ನು ಸಂಗ್ರಹಿಸಬೇಕು ಹಾಗೂ ಕಾನೂನಿನ ಪ್ರಕಾರ ಮುಂದುವರಿಯಬೇಕು ಎಂದು ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಹಾಗೂ ಸಂಜೀವ್ ಕಣ್ಣನ್ ಅವರನ್ನು ಒಳಗೊಂಡ ಪೀಠ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News