ಜುಲೈ 29ಕ್ಕೆ ಸಾರಿಗೆ ನೌಕರರ ಧರಣಿ

Update: 2021-07-26 18:25 GMT

ಬೆಂಗಳೂರು, ಜು.26: ಸಾರಿಗೆ ಮುಷ್ಕರದ ವೇಳೆ ಸೇವೆಯಿಂದ ವಜಾಗೊಳಿಸಿರುವ ಎಲ್ಲ ಕಾರ್ಮಿಕರನ್ನು ಕರ್ತವ್ಯಕ್ಕೆ ಮರು ನೇಮಕ ಮಾಡಿಕೊಳ್ಳಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಜು.29ರಂದು ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಒಕ್ಕೂಟ ಪ್ರತಿಭಟನೆಗೆ ಕರೆ ನೀಡಿದೆ.

ಸೋಮವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎಚ್.ಡಿ.ರೇವಪ್ಪ, ಅಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು

ನಿವೃತ್ತಿ ಅಂಚಿನಲ್ಲಿದ್ದ ನೌಕರರು ಮಾತ್ರವಲ್ಲದೆ, ಟ್ರೈನಿ ನೌಕರರನ್ನೂ ಸೇವೆಯಿಂದ ವಜಾಗೊಳಿಸಲಾಗಿದೆ. ಕೆಲವರ ಅಮಾನತು ಈವರೆಗೆ ತೆರವು ಮಾಡಿಲ್ಲ. 60 ಸಾವಿರಕ್ಕೂ ಹೆಚ್ಚು ಮಂದಿಗೆ ಆಪಾದನಾ ಪತ್ರ ನೀಡಿ ಶಿಸ್ತು ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ವೇತನ ಹೆಚ್ಚಳ ಹಾಗೂ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಎಪ್ರಿಲ್‍ನಲ್ಲಿ ಮುಷ್ಕರ ನಡೆಸಿದ್ದರು.ಇದಕ್ಕಾಗಿ ನಾಲ್ಕು ಸಾರಿಗೆ ನಿಗಮಗಳಲ್ಲಿ ಸಾವಿರಾರು ಕಾರ್ಮಿಕರನ್ನು ವಜಾಗೊಳಿಸಲಾಗಿದ್ದು, ವರ್ಗಾವಣೆ ಹಾಗೂ ಅಮಾನತು ಶಿಕ್ಷೆಗಳನ್ನು ನೀಡಲಾಗಿದೆ ಎಂದು ಆರೋಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News