ಯಡಿಯೂರಪ್ಪ ರಾಜೀನಾಮೆಯಿಂದ ನೊಂದು ಯುವಕ ಆತ್ಮಹತ್ಯೆ

Update: 2021-07-27 05:05 GMT

ಚಾಮರಾಜನಗರ, ಜು.27: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರಿಂದ ತೀವ್ರ ಬೇಸರಗೊಂಡ ಅಭಿಮಾನಿಯೊಬ್ಬ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಮುಂಜಾನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಚಿಕ್ಕನಾಗಪ್ಪ ಎಂಬವರ ಪುತ್ರ ರವಿ(ರಾಜಪ್ಪ) (35) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.

ಸೋಮವಾರ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ತೀರಾ ಬೇಸರದಿಂದ ಇದ್ದ ರವಿ ಮಂಗಳವಾರ ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಅತಿರೇಕದ ಅಭಿಮಾನ ಬೇಡ: ಯಡಿಯೂರಪ್ಪ ಮನವಿ

ರಾಜಕಾರಣದಲ್ಲಿ ಏರಿಳಿತಗಳು ಸಹಜ, ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು. ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ನನ್ನ ರಾಜೀನಾಮೆಯಿಂದ ಮನನ್ನೊಂದು ಗುಂಡ್ಲುಪೇಟೆ ತಾ॥ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ, ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು. ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು. ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ" ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News