ಮಹಿಳಾ ಹೋರಾಟಗಾರ್ತಿ, ಸಾಹಿತಿ ಅನ್ನಪೂರ್ಣಾ ವೆಂಕಟನಂಜಪ್ಪ ನಿಧನ

Update: 2021-07-27 08:03 GMT

ತುಮಕೂರು. ಜು.27: ಹಿರಿಯ ಸಾಹಿತಿ, ಹೋರಾಟಗಾರ್ತಿ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತೆ ಅನ್ನಪೂರ್ಣಾ ವಂಕಟನಂಜಪ್ಪ(68) ತಮ್ಮ ಸ್ವಗೃಹದಲ್ಲಿ ಮಂಗಳವಾರ ಮುಂಜಾನೆ 5 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕರ್ನಾಟಕ ಲೇಖಕಿಯರ ಬಳಗದ ಅಧ್ಯಕ್ಷೆಯಾಗಿ, ವರದಕ್ಷಿಣೆ ವಿರೋಧಿ ವೇದಿಕೆಯ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದ ಇವರು, ವಿವಿಧ ಸಂಘ ಸಂಸ್ಥೆಗಳ ಹಲವಾರು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಮಹಿಳೆಯರು, ಮಕ್ಕಳು, ದಲಿತ, ಪ್ರಗತಿಪರ ಹಾಗೂ ವಿದ್ಯಾರ್ಥಿ ಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರಲ್ಲದೆ, ಹೋರಾಟಗಾರರಿಗೆ ಆರ್ಥಿಕ ನೆರವು ನೀಡುವ ಮೂಲಕ ಚಳವಳಿಗಳ ಬೆನ್ನೆಲುಬಾಗಿ ಕೆಲಸ ಮಾಡಿದ್ದರು. ಇತ್ತೀಚೆಗೆ ಅವರು ಸಹಕಾರಿ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಸಹಕಾರ ಇಲಾಖೆ ಸಹಕಾರಿ ರತ್ನ ಪ್ರಶಸ್ತಿ ನೀಡಿ ಗೌರವಿಸಿತು.

ಮಾಜಿ ಸಚಿವ ಸೊಗಡು ಶಿವಣ್ಣ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ, ಮಾಜಿ ಶಾಸಕ ಡಾ.ರಫೀಕ್ ಅಹ್ಮದ್, ಹಿರಿಯ ಸಾಹಿತಿಗಳು, ರಾಜಕಾರಣಿಗಳು, ಅಧಿಕಾರಿ ವರ್ಗದವರು

ಸೇರಿದಂತೆ ಹಲವಾರು ಗಣ್ಯರು ಅನ್ನಫೂರ್ಣಾರ ಮನೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News