ಅಡ್ಕತ್ತ ಬೈಲ್: ಭಾರೀ ಪ್ರಮಾಣದ ಅಕ್ರಮ ಮದ್ಯ ಸಾಗಾಟ ಪತ್ತೆ; ಇಬ್ಬರ ಬಂಧನ

Update: 2021-07-27 10:26 GMT

ಕಾಸರಗೋಡು, ಜು.27: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಪ್ರಮಾಣದ ಮದ್ಯವನ್ನು ಕಾಸರಗೋಡು ನಗರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ್ದಾರೆ.

ಸೂರಂಬೈಲ್‌ ನ ಸುಬ್ರಹ್ಮಣ್ಯ (23) ಮತ್ತು ಮೊಗ್ರಾಲ್ ನ ಮುಝಮ್ಮಿಲ್(24)‌ ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಅಡ್ಕತ್ತ ಬೈಲ್ ನಿಂದ ಕಾರು ಸಹಿತ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕದಿಂದ ಮದ್ಯವನ್ನು ಕಾಸರಗೋಡಿಗೆ ಸಾಗಾಟ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿ 36 ಬಾಕ್ಸ್ ಗಳಲ್ಲಿ 1728 ಪ್ಯಾಕೆಟ್ ಮದ್ಯವಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News