ದಿಲ್ಲಿಯಲ್ಲಿ ಪ್ರಧಾನಿ ಮೋದಿ, ಕಾಂಗ್ರೆಸ್ ಮುಖಂಡರನ್ನು ಭೇಟಿಯಾದ ಮಮತಾ ಬ್ಯಾನರ್ಜಿ

Update: 2021-07-27 11:50 GMT
photo: ANI

ಹೊಸದಿಲ್ಲಿ: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅದ್ಭುತ ವಿಜಯ ಸಾಧಿಸಿದ ನಂತರ ಮೊದಲ ಬಾರಿ  ದಿಲ್ಲಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ನಾಯಕರಾದ ಕಮಲ ನಾಥ್ ಹಾಗೂ ಆನಂದ್ ಶರ್ಮಾ ಅವರನ್ನು ಭೇಟಿಯಾದರು. 2024 ರ ಲೋಕಸಭಾ ಚುನಾವಣೆಗೆ ಮುನ್ನ ಪ್ರತಿಪಕ್ಷಗಳ ಒಗ್ಗಟ್ಟನ್ನು ಹೆಚ್ಚಿಸುವ ಸಂಕೇತವಾಗಿ ಈ ಭೇಟಿ ನಡೆದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮುಖ್ಯಮಂತ್ರಿ  ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಲೋಕ್ ಕಲ್ಯಾಣ್ ಮಾರ್ಗದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾದರು ಹಾಗೂ ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.  

ತಾನು  ಬುಧವಾರ ಬ್ಯಾನರ್ಜಿಯವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಹೇಳಿದ್ದಾರೆ.  ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಅದೇ ದಿನ ಜನಪಥ್‌ನಲ್ಲಿರುವ ಅವರ ನಿವಾಸದಲ್ಲಿ ಬ್ಯಾನರ್ಜಿ ಭೇಟಿಯಾಗಲಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಸಂಸತ್ತು ಅಧಿವೇಶನ ನಡೆಯುತ್ತಿರುವಾಗ ಈ ಭೇಟಿ ನಡೆದಿದೆ. ಸಂಸತ್ತಿನಲ್ಲಿ ಸ್ವಲ್ಪ ಸಮಯ ಕಳೆಯಲು ಹಾಗೂ  ಪ್ರತಿಪಕ್ಷ ನಾಯಕರನ್ನು ಭೇಟಿ ಮಾಡಲು ಉದ್ದೇಶಿಸಿದ್ದೇನೆ ಎಂದು ಬ್ಯಾನರ್ಜಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News