ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

Update: 2021-07-27 17:17 GMT

ಬೆಂಗಳೂರು:  ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಇಂದು ಸಂಜೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಂಡಿದ್ದು, ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕರೆಂದು ಅಧಿಕೃತವಾಗಿ ಘೋಷಿಸಿದೆ.

ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಯಡಿಯೂರಪ್ಪ, ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಹೆಸರನ್ನು ಪ್ರಸ್ತಾಪಿಸಿದರೆ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅನುಮೋದಿಸಿದರು.

ಬಸವರಾಜ ಬೊಮ್ಮಾಯಿ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರಕಾರದ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹಾರ್ದಿಕ ಅಭಿನಂದನೆಗಳು. ಆಡಳಿತದ ಮೇಲೆ ಮರಳಿ ಗಮನ ಹರಿಸಲಾಗುವುದು ಎಂದು ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಭರವಸೆ ಇರಿಸಿದೆ.

ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ತಮ್ಮ ನೇತೃತ್ವದಲ್ಲಿ ರಾಜ್ಯ ಅಭಿವೃದ್ಧಿ ಪಥದಲ್ಲಿ ಇನ್ನಷ್ಟು ಉತ್ತುಂಗಕ್ಕೆ ಏರಲಿ ಎಂದು ಶುಭ ಕೋರುತ್ತೇನೆ. ನಾಡಿನ ಸಮಸ್ತ ಜನರ ಆಶೋತ್ತರಗಳನ್ನು ಸಾಕಾರಗೊಳಿಸಲು ಒಗ್ಗಟ್ಟಿನಿಂದ ಕೆಲಸ ಮಾಡೋಣ.

ಡಾ.ಕೆ.ಸುಧಾಕರ್, ಮಾಜಿ ಸಚಿವ

ರಾಜ್ಯದ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಪಕ್ಷದ ಎಲ್ಲ ನಾಯಕರ ಬೆಂಬಲದೊಂದಿಗೆ, ಲಕ್ಷಾಂತರ ಕಾರ್ಯಕರ್ತರ ಆಶೀರ್ವಾದದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯಲಿರುವ ಬೊಮ್ಮಾಯಿ ಅವರ ಸಮರ್ಥ, ಯಶಸ್ವಿ ಕಾರ್ಯನಿರ್ವಹಣೆಗೆ ಹಾರೈಸುತ್ತೇನೆ.

ಬಿ.ಎಸ್.ಯಡಿಯೂರಪ್ಪ, ನಿರ್ಗಮಿತ ಸಿಎಂ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News