ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆದು ಬಂದ ಹಾದಿ...

Update: 2021-07-28 05:21 GMT

ವ್ಯಕ್ತಿ ಪರಿಚಯ

ಜನನ : 28-01-1960

ಜನ್ಮ ಸ್ಥಳ : ಹುಬ್ಬಳ್ಳಿ

ತಂದೆ : ಎಸ್.ಆರ್.ಬೊಮ್ಮಾಯಿ (ರಾಜ್ಯದ ಮಾಜಿ ಮುಖ್ಯಮಂತ್ರಿ / ಕೇಂದ್ರದ ಮಾಜಿ ಸಚಿವ / ಅಧ್ಯಕ್ಷರು, ರಾಷ್ಟ್ರೀಯ ಜನತಾ ದಳ)

ತಾಯಿ : ಗಂಗಮ್ಮ ಎಸ್. ಬೊಮ್ಮಾಯಿ

ಧರ್ಮಪತ್ನಿ: ಚನ್ನಮ್ಮಾ ಬಿ. ಬೊಮ್ಮಾಯಿ

ಮಕ್ಕಳು: ಪುತ್ರ - ಭರತ, ಪುತ್ರಿ – ಆದಿತಿ

ಪ್ರಾಥಮಿಕ ವಿದ್ಯಾಭ್ಯಾಸ : ರೋಟರಿ ಇಂಗ್ಲೀಷ್ ಮಾದ್ಯಮ ಶಾಲೆ, ದೇಶಪಾಂಡೆ ನಗರ, ಹುಬ್ಬಳ್ಳಿ.

ಮಾಧ್ಯಮಿಕ ವಿದ್ಯಾಭ್ಯಾಸ : ರೋಟರಿ ಇಂಗ್ಲೀಷ ಮಾದ್ಯಮ ಶಾಲೆ, ದೇಶಪಾಂಡೆ ನಗರ, ಹುಬ್ಬಳ್ಳಿ.

ಪಿ.ಯು.ಸಿ: ಪಿ.ಸಿ.ಜಾಬಿನ ವಿಜ್ಞಾನ ಮಹಾವಿದ್ಯಾಲಯ, ಹುಬ್ಬಳ್ಳಿ.

ಇಂಜನೀಯರಿಂಗ್ ವಿದ್ಯಾಭ್ಯಾಸ (ಮೆಕ್ಯಾನಿಕಲ್): ಬಿ.ವ್ಹಿ.ಭೂಮರಡ್ಡಿ ತಾಂತ್ರಿಕ ಮಹಾವಿದ್ಯಾಲಯ, ಹುಬ್ಬಳ್ಳಿ.

ಪ್ರಾರಂಭದ ಉದ್ಯೋಗ: ಕೈಗಾರಿಕಾ ಉದ್ಯಮಿ ಹಾಗೂ 1983 ರಿಂದ 1985 ರವರೆಗೆ  ಪುಣೆ ಟೆಲ್ಕೋ ಕಂಪನಿಯಲ್ಲಿ ಎರಡು ವರ್ಷಗಳ ತಾಂತ್ರಿಕ ತರಬೇತಿ

ಉದ್ಯೋಗ ಸ್ಥಾಪನೆ: ಹುಬ್ಬಳ್ಳಿ ಹಾಗೂ ಬೆಂಗಳೂರು.

ಸಾಮಾಜಿಕ ಹಾಗೂ ರಾಜಕೀಯ ಸೇವೆ : ಕಾಲೇಜ್ ವಿದ್ಯಾಭ್ಯಾಸ ದಿನದಿಂದಲೇ ಸಾಮಾಜಿಕ ಹಾಗೂ ರಾಜಕೀಯ ಕಾರ್ಯ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ ಹಾಗೂ ಸಂಘಟನೆಗಳಿಗೆ ಸತತ ಪ್ರಯತ್ನ

► 2007 ರಲ್ಲಿ ಜುಲೈನಲ್ಲಿ ಧಾರವಾಡದಿಂದ ನರಗುಂದವರೆಗೆ 232 ಕಿ.ಮೀ 21 ದಿನಗಳ ಬೃಹತ್ ರೈತರೊಂದಿಗೆ ಪಾದಯಾತ್ರೆ.

► 1993 ರಲ್ಲಿ ಹುಬ್ಬಳ್ಳಿ ನಗರದಲ್ಲಿ ನಡೆದ ರಾಜ್ಯ ಯುವಜನತಾ ದಳದ ಐತಿಹಾಸಿಕ ಬೃಹತ್ ರ್ಯಾಲಿಯ ಸಂಘಟನೆಯ ನೇತೃತ್ವ.

► 1995 ರಲ್ಲಿ ಹುಬ್ಬಳ್ಳಿ ನಗರದ ಈದ್ಗಾ ಮೈದಾನದ ಸಮಸ್ಯೆಯ ಶಾಸ್ವತ ಪರಿಹಾರಕ್ಕೆ ರಾಜ್ಯ ಸರ್ಕಾರದ ಮೂಲಕ ಪ್ರಯತ್ನ / ನೇತೃತ್ವ.

ಪಕ್ಷದಲ್ಲಿ ಸ್ಥಾನ

► 1995 ರಲ್ಲಿ ರಾಜ್ಯದ ಜನತಾದಳ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

► ರಾಜಕೀಯ ಸ್ಥಾನಮಾನ: 1996 ರಿಂದ 1997 ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಜೆ.ಎಚ್.ಪಟೇಲ್ ಇವರಿಗೆ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ

► 31-12-1997 ಹಾಗೂ 04-12-2003 ರಲ್ಲಿ ರಾಜ್ಯ ವಿಧಾನ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳಿಂದ (ಧಾರವಾಡ-ಹಾವೇರಿ-ಗದಗ) ನಡೆದ ಚುನಾವಣೆಯಲ್ಲಿ ಸತತ ಎರಡು ಬಾರಿ ವಿಧಾನ ಪರಿಷತ್ತಿನ ಸದಸ್ಯರಾಗಿ ಆಯ್ಕೆ.

► 22-05-2008 ರಂದು ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾಂವ ವಿಧಾನಸಭೆ ಮತಕ್ಷೇತ್ರದಿಂದ ಆಯ್ಕೆ

► ರಾಜ್ಯದ ಹಿಂದಿನ ಬಿ.ಜೆ.ಪಿ ಸರ್ಕಾರದಲ್ಲಿ ಬಿ.ಎಸ್.ಯಡಿಯೂರಪ್ಪ / ಡಿ.ವಿ.ಸದಾನಂದಗೌಡ ಹಾಗೂ ಜಗದೀಶ ಶೆಟ್ಟರ್ ಇವರ ಸಚಿವ ಸಂಪುಟದಲ್ಲಿ ಸತತ ಐದು ವರ್ಷಗಳವರೆಗೆ ಜಲ ಸಂಪನ್ಮೂಲ ಸಚಿವರಾಗಿ ಸೇವೆ.

ದಿನಾಂಕ : 05-05-2013 ರಂದು ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾಂವ ವಿಧಾನಸಭಾ ಮತಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆ.

ದಿನಾಂಕ: 12-05-2018 ರಂದು ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾಂವ ವಿಧಾನಸಭಾ ಮತಕ್ಷೇತ್ರದಿಂದ ತೃತೀಯ ಬಾರಿಗೆ ಆಯ್ಕೆಯಾಗಿ ಬಿ.ಎಸ್.ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ಗೃಹ ಸಚಿವರಾಗಿ ಸೇವೆ.

ಉಡುಪಿ ಉಸ್ತುವಾರಿ ಸಚಿವರಾಗಿದ್ದ ಬೊಮ್ಮಾಯಿ
ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಇದೀಗ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರಿ ವಹಿಸಿಕೊಳ್ಳುತಿದ್ದಾರೆ. ಇದೀಗ 2019ರ ಆಗಸ್ಟ್‌ನಿಂದ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿರುವ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಹಾವೇರಿಯ ಉಸ್ತುವಾರಿ ಸಚಿವರೂ ಆಗಿರುವ ಬೊಮ್ಮಾಯಿ, ಹೆಚ್ಚುವರಿಯಾಗಿ ಉಡುಪಿ ಜಿಲ್ಲೆಯ ಉಸ್ತುವಾರಿಯನ್ನು ನಿರ್ವಹಿಸುತಿದ್ದರು.

ಕಳೆದೆರಡು ವರ್ಷಗಳಲ್ಲಿ ಅವರು ಜಿಲ್ಲೆಗೆ ಅಧಿಕೃತವಾಗಿ ಭೇಟಿ ನೀಡಿರುವುದು ದೊಡ್ಡ ಸಂಖ್ಯೆಯಲ್ಲಿಲ್ಲ. ರಾಜ್ಯೋತ್ಸವ, ಗಣರಾಜ್ಯೋತ್ಸವ, ಸ್ವಾತಂತ್ರ ದಿನಾಚರಣೆಗಳ ಸಂದರ್ಭದಲ್ಲಿ ಅವರು ಜಿಲ್ಲೆಗೆ ಬಂದು ಧ್ವಜಾರೋಹಣ ನೆರವೇರಿಸಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸುತಿದ್ದರು. ಆದರೆ ಅಗತ್ಯ ಸಂದರ್ಭದಲ್ಲಿ ಅವರು ಅಧಿಕಾರಿಗಳೊಂದಿಗೆ ನೇರ ಸಂಪರ್ಕದಲ್ಲಿದ್ದು ಜಿಲ್ಲಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುತಿದ್ದರಲ್ಲದೇ, ಅಗತ್ಯ ಕ್ರಮಗಳನ್ನು ಕೈಗೊಳ್ಳುತಿದ್ದರು. ಕೊರೋನ ಅವಧಿಯಲ್ಲಿ ಅವರು ನಿರಂತರವಾಗಿ ಬೆಂಗಳೂರಿನಿಂದ ವೀಡಿಯೋ ಕಾನ್ಫರೆನ್ಶ್ ಮೂಲಕವೇ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೊರೋನ ನಿಯಂತ್ರಣದಲ್ಲಿ ಸೂಕ್ತ ಮಾರ್ಗದರ್ಶನಗಳನ್ನು ನೀಡುತಿದ್ದರು.

ಬಸವರಾಜ ಬೊಮ್ಮಾಯಿ ಅವರ ಅಪರೂಪದ ಫೋಟೊಗಳು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News