ಬಾಳಿಗಾ ಹತ್ಯೆ ಪ್ರಕರಣ: ಆರೋಪಿ ನರೇಶ್ ಶೆಣೈಗೆ ಹೈಕೋರ್ಟ್ ನೋಟಿಸ್

Update: 2021-07-27 16:56 GMT

ಬೆಂಗಳೂರು, ಜು.27: ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗಾ ಹತ್ಯೆ ಪ್ರಕರಣದ ಆರೋಪಿಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಆರೋಪಿ ನರೇಶ್ ಶೆಣೈಗೆ ನೋಟಿಸ್ ಜಾರಿ ಮಾಡಿದೆ.

ಆರೋಪಿ ನರೇಶ್ ಶೆಣೈಗೆ ನೀಡಿರುವ ಜಾಮೀನು ರದ್ದುಪಡಿಸಬೇಕು ಹಾಗೂ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವರೆಗೆ ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಅನುರಾಧಾ ಬಾಳಿಗ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಆರೋಪಿ ನರೇಶ್ ಶಣೈಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ಪ್ರಕರಣವೇನು: ಮಂಗಳೂರಿನ ವೆಂಕಟರಮಣ ದೇವಸ್ಥಾನದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಆರೋಪಿಸಿದ್ದರು. ಆ ಬಳಿಕ 2016ರ ಮಾ.23ರಂದು ವಿನಾಯಕ ಬಾಳಿಗ ಅವರನ್ನು ಮಂಗಳೂರಿನ ಕೊಡಿಯಾಲ್ ಬೈಲ್ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಜೂನ್ 26ರಂದು ನರೇಶ್ ಶೆಣೈ ಅವರನ್ನು ಬಂಧಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News