ಫಲ್ಗುಣಿ ನದಿ, ಡ್ಯಾಂಗೆ ಕಲುಷಿತ ನೀರು ಹರಿಸುತ್ತಿರುವ ಮಂಗಳೂರು ಪಾಲಿಕೆ: ಹೈಕೋರ್ಟ್ ಅಸಮಾಧಾನ

Update: 2021-07-27 16:59 GMT

ಬೆಂಗಳೂರು, ಜು.27: ಮಂಗಳೂರಿನ ಘನತ್ಯಾಜ್ಯ ವಿಲೇವಾರಿ ಘಟಕದಿಂದ ಹೊರ ಬರುತ್ತಿರುವ ಕಲುಷಿತ ನೀರು ಫಲ್ಗುಣಿ ನದಿ ಹಾಗೂ ಮರವೂರು ಡ್ಯಾಂಗೆ ಸೇರುತ್ತಿರುವುದನ್ನು ತಡೆಗಟ್ಟಲು ಯಾವುದೇ ಕ್ರಮಕೈಗೊಳ್ಳದ ಮಂಗಳೂರಿನ ಮಹಾನಗರ ಪಾಲಿಕೆ ಹಾಗೂ ರಾಜ್ಯ ಸರಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಘನತ್ಯಾಜ್ಯ ಭೂಭರ್ತಿ ಘಟಕ ಕುಸಿತದಿಂದ ಆಗಿರುವ ಅನಾಹುತಗಳ ಕುರಿತು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಘನತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಪಾಲಿಸದ ಮಂಗಳೂರು ಪಾಲಿಕೆ ಹಾಗೂ ಸರಕಾರದ ನಡೆಗೆ ಬೇಸರ ವ್ಯಕ್ತಪಡಿಸಿದೆ. ಅಲ್ಲದೆ, ಮಂಗಳೂರು ಮಹಾನಗರ ಪಾಲಿಕೆಯು ಎಪ್ರಿಲ್ 23ರಂದು ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ತಿಳಿಸಿರುವಂತೆ ಸಮಸ್ಯೆ ಪರಿಹಾರಕ್ಕೆ ಯಾವ್ಯಾವ ದಿನಾಂಕದಲ್ಲಿ ಏನೆಲ್ಲಾ ಕಾರ್ಯ ಪೂರ್ಣಗೊಳಿಸಿದೆ ಎಂಬ ಕುರಿತು ವರದಿ ಸಲ್ಲಿಸಬೇಕು ಎಂದು ಸರಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಆ.26ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News