ಉದ್ಯಾವರ ಚರ್ಚ್‌ನಲ್ಲಿ ಹಿರಿಯರ ದಿನ ಆಚರಣೆ

Update: 2021-07-27 17:56 GMT

ಉಡುಪಿ, ಜು.27: ಉದ್ಯಾವರ ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯದ ಅಧೀನದಲ್ಲಿರುವ ಕಥೋಲಿಕ್ ಸಭಾ, ಸ್ತ್ರೀ ಸಂಘಟನೆ, ಯುವ ಮತ್ತು ಆರೊಗ್ಯ ಆಯೊಗದ ಸಹಭಾಗಿತ್ವದಲ್ಲಿ ದೇವಾಲಯದ ವ್ಯಾಪ್ತಿಯ ಹಿರಿಯರ ದಿನವ್ನು ಮಂಗಳವಾರ ಆಚರಿಸಲಾಯಿತು.

ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಮತ್ತು ಉದ್ಯಾವರ ದೇವಾಲಯದ ಪ್ರಧಾನ ಧರ್ಮಗುರು ಅತಿ ವಂ.ಫಾ. ಸ್ಟ್ಯಾನಿ ಬಿ.ಲೋಬೊ ಮತ್ತು ಫಾ. ಝೇವಿಯರ್ ಪಿಂಟೊ ನೇತೃತ್ವದಲ್ಲಿ ಕೃತಜ್ಞತಾ ಬಲಿಪೂಜೆ ನಡೆಯಿತು. ಬಳಿಕ ಚರ್ಚ್ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ದಾಂಪತ್ಯ ಜೀವನದಲ್ಲಿ ಐವತ್ತಕ್ಕೂ ಅಧಿಕ ವರ್ಷದ ಸಂಭ್ರಮದಲ್ಲಿರುವ ಹಿರಿಯ ಜೋಡಿಗಳನ್ನು ಗೌರವಿಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಮಾಹೆ ಮಣಿಪಾಲದ ಸ್ಟೂಡೆಂಟ್ ಕೌನ್ಸಿಲರ್ ಡಾ. ರಾಯನ್ ಮಿನೇಜಸ್ ಮಾತನಾಡಿ, ಪ್ರಸ್ತುತ ಕಾಲದಲ್ಲಿ ಯುವಜನರಿಗಿಂತ ಹೆಚ್ಚು ಸಮಸ್ಯೆ ಇರೋದು ಹಿರಿಯರಿಗೆ. ಹಿಂದಿನ ಕಾಲದಲ್ಲಿ ಮನೆ ತುಂಬಾ ಜನರಿದ್ದರು. ಆದರೆ ಪರಿಸ್ಥಿತಿ ಬದಲಾಗಿದೆ. ಹಲವು ಮನೆಗಳಲ್ಲಿ ಏಕಾಂಗಿ ಜೀವನ ನಡೆಸುವವರೆ ಹೆಚ್ಚು. ಇದರಿಂದಾಗಿ ಮಾನಸಿಕ ಸಂತುಲನ, ಒತ್ತಡ, ಮನಸ್ಸಿಗೆ ಏಕಾಗ್ರತೆ ಇಲ್ಲದೆ ಇರುವುದರಿಂದ ಸಮಸ್ಯೆಗಳು ಹೆಚ್ಚಾಗಿವೆ ಎಂದರು.

ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ನೊರೊನ್ಹಾ, ಕಾರ್ಯ ದರ್ಶಿ ಮೈಕಲ್ ಡಿಸೋಜ, ಕಥೋಲಿಕ್ ಸಭಾ ಉಡುಪಿ ಪ್ರದೇಶ್ ಕೇಂದ್ರೀಯ ಸಮಿತಿಯ ಉಪಾಧ್ಯಕ್ಷ ರೊನಾಲ್ಡ್ ಅಲ್ಮೇಡಾ, ಹಿರಿಯರಾದ ಜೋಸೆಫ್ ಮತ್ತು ಗ್ರೇಸಿ ಕರ್ಡೋಜ, ಕಥೋಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಅಂದ್ರಾದೆ, ಸ್ತ್ರೀ ಸಂಘಟನೆಯ ಕಾರ್ಯದರ್ಶಿ ಐರಿನ್ ಪಿರೇರಾ, ಯುವ ಆಯೊಗದ ಸಂಚಾಲಕ ರೊಯ್ಸ್ ಫೆರ್ನಾಂಡಿಸ್, ಕಥೋಲಿಕ್ ಸಭಾ ಮಾಜಿ ಅಧ್ಯಕ್ಷ ಲೋರೆನ್ಸ್ ಡೇಸಾ ಉಪಸ್ಥಿತರಿದ್ದರು.

ಆರೊಗ್ಯ ಆಯೊಗದ ಸಂಚಾಲಕ ವಿಲ್ಫ್ರೆಡ್ ಕ್ರಾಸ್ಟೋ ಸ್ವಾಗತಿಸಿದರು. ಕಥೋಲಿಕ್ ಸಭಾ ಕಾರ್ಯದರ್ಶಿ ಟೆರೆನ್ಸ್ ಪಿರೇರಾ ವಂದಿಸಿದರು. ಸ್ಟೀವನ್ ಕುಲಾಸೊ ಉ್ಯಾವರ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News