ಉಡುಪಿ: ಆ.4ಕ್ಕೆ ಉದ್ಯಮಶೀಲತಾ ತಿಳುವಳಿಕೆ ಶಿಬಿರ

Update: 2021-07-27 18:55 GMT

ಉಡುಪಿ, ಜು.27: ಬೆಂಗಳೂರಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮ ಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಉಡುಪಿ ಹಾಗೂ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ ಆಗಸ್ಟ್ 4ರಂದು ಬೆಳಗ್ಗೆ 9:30ಕ್ಕೆ ಮಣಿಪಾಲದ ಪೆರಂಪಳ್ಳಿಯಲ್ಲಿರುವ ಭಾರತೀಯ ವಿಕಾಸ ಟ್ರಸ್ಟ್‌ನಲ್ಲಿ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರವನ್ನು ಆಯೋಜಿಸಲಾಗಿದೆ.

18ರಿಂದ 40 ವರ್ಷದೊಳಗಿನ ಎಸೆಸೆಲ್ಸಿ ತೇರ್ಗಡೆಗೊಂಡ ಅಭ್ಯರ್ಥಿಗಳು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ.

ಶಿಬಿರದಲ್ಲಿ ಉದ್ಯಮಶೀಲನ ಗುಣಲಕ್ಷಣಗಳು, ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಉದ್ಯಮ ನಿರ್ವಹಣೆ ಇತ್ಯಾದಿ ವಿಷಯ ಗಳ ಕುರಿತು ಮಾಹಿತಿಗಳನ್ನು ನೀಡಲಾಗುವುದು.

ಶಿಬಿರದಲ್ಲಿ ಉದ್ಯಮಶೀಲನ ಗುಣಲಕ್ಷಣಗಳು, ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಉದ್ಯಮ ನಿರ್ವಹಣೆ ಇತ್ಯಾದಿ ವಿಷಯ ಗಳ ಕುರಿತು ಮಾಹಿತಿಗಳನ್ನು ನೀಡಲಾಗುವುದು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊ.ನಂ: 8217530146 ಹಾಗೂ 9886943717ನ್ನು ಸಂಪರ್ಕಿಸುವಂತೆ ಸಿಡಾಕ್‌ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News