​ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಲಕ್ಕಪ್ಪ ಗೌಡರ ಸ್ಮರಣೆ

Update: 2021-07-27 18:56 GMT

ಮಂಗಳೂರು,ಜು.27:ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ, ಜಾನಪದ ವಿದ್ವಾಂಸ ಪ್ರೊ. ಲಕ್ಕಪ್ಪಗೌಡ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಮಂಗಳವಾರ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಒಂದು ನಿಮಿಷದ ಮೌನಪ್ರಾರ್ಥನೆ ಮತ್ತು ಭಾವಚಿತ್ರಕ್ಕೆ ಹೂ ಸಮರ್ಪಿಸಿ ಲಕ್ಕಪ್ಪ ಗೌಡರ ಸೇವೆಯನ್ನು ಸ್ಮರಿಸಲಾಯಿತು. 

ಶ್ರದ್ಧಾಂಜಲಿ ಸಭೆಯಲ್ಲಿ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಪ್ರೊ. ಸೋಮಣ್ಣ ಹೊಂಗಳ್ಳಿ ಅವರು ಮಾತನಾಡಿ, ಪ್ರೊ. ಲಕ್ಕಪ್ಪಗೌಡ ಅವರು 1980 ರಿಂದ 1981ರ ವರೆಗೆ ಮಂಗಳಗಂಗೋತ್ರಿಯ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ಕನ್ನಡ ಜಾನಪದ ಕ್ಷೇತ್ರಕ್ಕೆ ಅವರ ಕೊಡುಗೆ ಅನನ್ಯವಾದದ್ದು. ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಭಾರತಿ ಅಧ್ಯಯನ ಸಂಸ್ಥೆಯನ್ನು ಕಟ್ಟಿ ಬೆಳೆಸುವಲ್ಲಿ ಅವರ ಪಾತ್ರ ಮಹತ್ವದ್ದು ಎಂದು ನೆನಪಿಸಿಕೊಂಡರು. 

ಸಭೆಯಲ್ಲಿ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ, ಡಾ.ನಾಗಪ್ಪಗೌಡ, ವಿಭಾಗದ ಸಂಶೋಧನಾರ್ಥಿಗಳು ಮತ್ತು ಸಿಬ್ಭಂದಿ ವರ್ಗದವರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News