ಟ್ರಕ್ ಢಿಕ್ಕಿ: ರಸ್ತೆ ಪಕ್ಕ ನಿದ್ರಿಸುತ್ತಿದ್ದ 18 ಮಂದಿ ಮೃತ್ಯು

Update: 2021-07-28 02:54 GMT
photo: twitter@ndtv

ಲಕ್ನೋ: ಉತ್ತರ ಪ್ರದೇಶದ ಬಾರಾಬಂಕಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 18 ಮಂದಿ ಮೃತಪಟ್ಟಿದ್ದಾರೆ. 

ಲಕ್ನೋ- ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯ ರಾಮ್‍ಸ್ನೇಹಿಘಾಟ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವೇಗವಾಗಿ ಬಂದ ಟ್ರಕ್, ಡಬಲ್ ಡಕ್ಕರ್ ಬಸ್‍ಗೆ ಹಿಂದಿನಿಂದ ಢಿಕ್ಕಿಹೊಡೆದಾಗ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಇತರ 19 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಲಕ್ನೋ ಟ್ರಾಮಾ ಸೆಂಟರ್ ಗೆ ದಾಖಲಿಸಲಾಗಿದೆ.

ಮಧ್ಯರಾತ್ರಿ 1.30ರ ವೇಳೆಗೆ ಈ ದುರಂತ ಸಂಭವಿಸಿದೆ. ಅಯೋಧ್ಯೆ ಗಡಿಯ ಕಲ್ಯಾಣಿ ನದಿ ಸೇತುವೆಯಲ್ಲಿ 1 ಗಂಟೆಯ ವೇಳೆಗೆ ಬಸ್ಸಿನ ಆ್ಯಕ್ಸಿಲ್ ತುಂಡಾಗಿ ಬಸ್ಸು ಕೆಟ್ಟು ನಿಂತಿತ್ತು. ಚಾಲಕ ಹಾಗೂ ಆಪರೇಟರ್, ಬಸ್ಸನ್ನು ಬದಿಯಲ್ಲಿ ನಿಲ್ಲಿಸಿ ದುರಸ್ತಿ ಮಾಡುತ್ತಿದ್ದರು. ಏತನ್ಮಧ್ಯೆ ಲಕ್ನೋ ಕಡೆಯಿಂದ ವೇಗವಾಗಿ ಬಂದ ಟ್ರಕ್ಕೊಂದು ಬಸ್ಸಿಗೆ ಢಿಕ್ಕಿ ಹೊಡೆಯಿತು. 

140 ಕ್ಕೂ ಹೆಚ್ಚು ಮಂದಿ ಕೂಲಿ ಕಾರ್ಮಿಕರು ಈ ಬಸ್ಸಿನಲ್ಲಿ ಅಂಬಾಲದಿಂದ ಬಿಹಾರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಬಸ್ಸು ದುರಸ್ತಿ ಮಾಡುವ ವೇಳೆ ರಸ್ತೆ ಬದಿಯಲ್ಲಿ ನಿದ್ರಿಸುತ್ತಿದ್ದ 18 ಮಂದಿ ಕೂಲಿಕಾರ್ಮಿಕರು ಮೃತಪಟ್ಟಿದ್ದು, ಇತರ 24 ಮಂದಿ ಗಾಯಗೊಂಡಿದ್ದಾರೆ ಎಂದು ಇಂಡಿಯಾಟಿವಿ ವರದಿ ಮಾಡಿದೆ. ಈ ಡಿಕ್ಕಿ ಎಷ್ಟು ಭೀಕರವಾಗಿತ್ತೆಂದರೆ ಬಹುತೇಕ ಮಂದಿ ಸ್ಥಳದಲ್ಲೇ ಮೃತಪಟ್ಟರು.

ಘಟನೆಯಲ್ಲಿ 18 ಮಂದಿ ಜೀವ ಕಳೆದುಕೊಂಡಿದ್ದು, ಇತರ 19 ಮಂದಿ ಗಾಯಗೊಂಡಿದ್ದಾರೆ. ಪರಿಹಾರ ಕಾರ್ಯಾಚರಣೆ ಮುಂದುವರಿದಿದ್ದು, ಬಸ್ಸಿನಡಿ ಸಿಕ್ಕಿಹಾಕಿಕೊಂಡ ದೇಹಗಳನ್ನು ಹೊರಗೆಳೆಯುವ ಪ್ರಯತ್ನ ನಡೆದಿದೆ ಎಂದು ಲಕ್ನೋ ವಲಯ ಎಡಿಜಿಪಿ ಅತ್ಯ ನಾರಾಯಣ ಸಬತ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News