ಸರಪಾಡಿ : ಅಟೋರಿಕ್ಷಾ ಪಲ್ಟಿಯಾಗಿ ಓರ್ವ ಮೃತ್ಯು, 7 ಮಂದಿಗೆ ಗಾಯ

Update: 2021-07-28 06:08 GMT

ಬಂಟ್ವಾಳ, ಜು.28: ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಅಟೋರಿಕ್ಷಾವೊಂದು ಪಲ್ಟಿಯಾಗಿ ಓರ್ವ ಮೃತಪಟ್ಟು 7 ಮಂದಿ ಗಾಯಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (85)ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲಾದರೆ , ಅಲ್ಪಸ್ವಲ್ಪ ಗಾಯಗೊಂಡ ಉಳಿದವರು ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಟೋರಿಕ್ಷಾ ವೂ ಸರಪಾಡಿಯಿಂದ ಬಂಟ್ವಾಳ ಕಡೆಗೆ ಹಲವು ಮಂದಿ ಪ್ರಯಾಣಿಕರನ್ನು ಕೂರಿಸಿಕೊಂಡು ಬಂಟ್ವಾಳ ಕಡೆಗೆ ಆಗಮಿಸುವ ವೇಳೆ ಪರಿಯಪಾದೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News