ಬಿಜೆಪಿಯನ್ನು ಸೋಲಿಸಲು ಎಲ್ಲರೂ ಒಗ್ಗೂಡಬೇಕು: ಸೋನಿಯಾ ಗಾಂಧಿ ಭೇಟಿ ಬಳಿಕ ಮಮತಾ ಬ್ಯಾನರ್ಜಿ ಹೇಳಿಕೆ

Update: 2021-07-28 13:01 GMT
photo : PTI

ಹೊಸದಿಲ್ಲಿ: ಎಪ್ರಿಲ್-ಮೇ ತಿಂಗಳಲ್ಲಿ ಬಂಗಾಳ ಚುನಾವಣೆಯಲ್ಲಿ ಉಭಯ ಪಕ್ಷಗಳು ಪ್ರತಿಸ್ಪರ್ಧಿಗಳಾಗಿ ಸ್ಪರ್ಧಿಸಿದ ಬಳಿಕ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ದಿಲ್ಲಿಯಲ್ಲಿ ಬುಧವಾರ ಭೇಟಿಯಾದರು.

2024 ರ ರಾಷ್ಟ್ರೀಯ ಚುನಾವಣೆಯಲ್ಲಿ ಒಂದು ಏಕೀಕೃತ ಹೋರಾಟಕ್ಕಾಗಿ ಒಟ್ಟಾಗಲು ವಿರೋಧ ಪಕ್ಷಗಳು ಯತ್ನಿಸುತ್ತಿರುವ ಮಧ್ಯೆ ಈ ಭೇಟಿ ಮಹತ್ವದ್ದಾಗಿದೆ.

"ಇದೊಂದು ಬಹಳ ಒಳ್ಳೆಯ ಸಭೆ. ಸಕಾರಾತ್ಮಕ ಸಭೆ. ಬಿಜೆಪಿಯನ್ನು ಸೋಲಿಸಲು ಎಲ್ಲರೂ ಒಗ್ಗೂಡಬೇಕು. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆ" ಎಂದು ಮಮತಾ ಬ್ಯಾನರ್ಜಿ 45 ನಿಮಿಷಗಳ ಸಂವಾದದ ನಂತರ ಹೇಳಿದರು.

ಬಂಗಾಳ ಮುಖ್ಯಮಂತ್ರಿ ದಿಲ್ಲಿಯಲ್ಲಿ ಐದು ದಿನಗಳ ಕಾಲ ಇರಲಿದ್ದು, ಕಾಂಗ್ರೆಸ್ ಹಿರಿಯ ಮುಖಂಡರಾದ ಕಮಲ್ ನಾಥ್ ಮತ್ತು ಆನಂದ್ ಶರ್ಮಾ ಅವರನ್ನು ನಿನ್ನೆ ಭೇಟಿ ಮಾಡಿದ್ದರು.

ಬಂಗಾಳದಲ್ಲಿ ಭರ್ಜರಿ ವಿಜಯದ ನಂತರ ಮಮತಾ ಬ್ಯಾನರ್ಜಿ ಅವರು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಪ್ರತಿಪಕ್ಷಗಳ ಒಗ್ಗೂಡಿಸುವ ಪ್ರಯತ್ನದಲ್ಲಿ ಪ್ರಮುಖ ವ್ಯಕ್ತಿಯಾಗಿ ಹೊರ ಹೊಮ್ಮಿದ್ದಾರೆ.

ಬಂಗಾಳದ ಗೆಲುವಿನ ನಂತರ ಮೊದಲ ಬಾರಿಗೆ ದಿಲ್ಲಿ ಭೇಟಿಯಲ್ಲಿರುವ ಮುಖ್ಯಮಂತ್ರಿ ಮಮತಾ ಅವರು ಹಲವಾರು ಪ್ರಮುಖ ವಿರೋಧ ಪಕ್ಷಗಳ ನಾಯಕರೊಂದಿಗೆ ಸಭೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News