×
Ad

ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರಲ್ಲ: ಮಾಜಿ ಸಿಎಂ ಜಗದೀಶ್ ಶೆಟ್ಟರ್

Update: 2021-07-28 19:07 IST

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಸವಾರಾಜ ಬೊಮ್ಮಾಯಿ ಆಯ್ಕೆಯಾಗಿರುವ ಬೆನ್ನಲ್ಲೇ ಸಚಿವ ಸ್ಥಾನಕ್ಕಾಗಿ ಕೆಲವು ಶಾಸಕರು ಭಾರೀ ಪ್ರಯತ್ನ ನಡೆಸುತ್ತಿದ್ದು, ನಾನು ಸಚಿವ ಸಂಪುಟಕ್ಕೆ ಸೇರಲು ಇಚ್ಛೆ ಪಡಲ್ಲ ಎಂದು ಮಾಜಿ ಮುಖ್ಯಮಂತ್ರಿಯಾಗಿರುವ ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರ.

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಶೆಟ್ಟರ್,  ಮಾಜಿ ಮುಖ್ಯಮಂತ್ರಿ ಆಗಿರುವ ಕಾರಣ ನಾನು ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟಕ್ಕೆ ಸೇರುವುದಿಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರ ಎಂದು ತಿಳಿಸಿದರು. 

ಈ ಹಿಂದೆ ಪಕ್ಷದ ರಾಜ್ಯ ಅಧ್ಯಕ್ಷರಾಗಿ, ಸಚಿವ, ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಪಕ್ಷದ ಕೆಲ ಮಟ್ಟದಿಂದ ಹಲವು ಜವಾಬ್ದಾರಿಗಳನ್ನು ನಿಭಾಯಿಸಿಕೊಂಡು ಬಂದಿದ್ದೇನೆ, ಇನ್ನು ಯುವಕರಿಗೆ ಹೆಚ್ಚಿನ ಆಧ್ಯತೆ ನೀಡುವಂತೆ ಪಕ್ಷದ ವರಿಷ್ಟರಿಗೆ ಸಲಹೆ ಮಾಡುತ್ತೇನೆ ಎಂದು ಹೇಳಿದ್ದಾರೆ. 

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಆಡಿಯೋ ವೈರಲ್ ಕುರಿತು ಪ್ರತಿಕ್ರಿಯಿಸಿರುವ ಶೆಟ್ಟರ್, ಆಡಿಯೋ ಮತ್ತು ನನ್ನ ನಿರ್ಧಾರಕ್ಕೂ ಯಾವುದೇ ಸಂಬಂಧ ಇಲ್ಲ, ಇದು ನನ್ನ ವೈಯಕ್ತಿಕ ನಿರ್ಧಾರ ಎಂದು ಸ್ಪಷ್ಟಪಡಿಸಿದರು. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News