1800 ಕ್ಷೌರಿಕ ವೃತ್ತಿ ನಿರತರಿಗೆ ಆಹಾರ ಸಾಮಗ್ರಿ ಕಿಟ್ ವಿತರಣೆ
ಉಡುಪಿ, ಜು.28: ಕಾರ್ಮಿಕ ಇಲಾಖೆ ಅಸಂಘಟಿತ ಕಾರ್ಮಿಕರ ಸಾಮಾ ಜಿಕ ಭದ್ರತಾ ಮಂಡಳಿ ಕೋವಿಡ್-19 ನಿಮಿತ್ತ ಉಡುಪಿ ಜಿಲ್ಲೆಯ ಕ್ಷೌರಿಕ ವೃತ್ತಿ ನಿರತರಿಗೆ ಕೊಡಮಾಡಿದ ಸುಮಾರು 1800 ಆಹಾರ ಸಾಮಾಗ್ರಿ ಕಿಟ್ಗಳ ವಿತರಣಾ ಸಮಾರಂಭವು ಜಿಲ್ಲಾ ಸವಿತಾ ಸಮಾಜದ ಸಹಭಾಗಿತ್ವದಲ್ಲಿ ಸವಿತಾ ಸಮಾಜ ಸಮುದಾಯ ಭವನದಲ್ಲಿ ಜರಗಿತು.
ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಮತ್ತು ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್. ಉದ್ಘಾಟಿಸಿ, ಆಹಾರ ಸಾಮಾಗ್ರಿ ಕಿಟ್ಗಳನ್ನು ವಿತರಿಸಿ ದರು. ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ವಿಶ್ವನಾಥ್ ಭಂಡಾರಿ ನಿಂಜೂರು ಅಧ್ಯಕ್ಷತೆ ವಹಿಸಿದ್ದರು.
ಉಡುಪಿ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ನವೀನ್‌ಚಂದ್ರ ಭಂಡಾರಿ, ಕಾರ್ಮಿಕ ಉಪನಿರೀಕ್ಷಕ ಪ್ರವೀಣ್ ಕುಮಾರ್, ಗೌರವ ಅಧ್ಯಕ್ಷ ಗೋವಿಂದ ಭಂಡಾರಿ, ಜಿಲ್ಲಾ ಸವಿತಾ ಸಮಾಜ ಕೋಶಾಧಿಕಾರಿ ಶೇಖರ್ ಸಾಲಿಯಾನ್ ಆದಿಉಡುಪಿ, ಉಡುಪಿ ತಾಲೂಕು ಅಧ್ಯಕ್ಷ ರಾಜು ಭಂಡಾರಿ ಕಿನ್ನಿಮೂಲ್ಕಿ, ಕಾರ್ಕಳ ತಾಲೂಕು ಅಧ್ಯಕ್ಷ ನಾಗೇಶ್ ಭಂಡಾರಿ ಬಜಗೋಳಿ, ಬ್ರಹ್ಮಾವರ ತಾಲೂಕು ಅಧ್ಯಕ, ಶಿವರಾಮ್ ಭಂಡಾರಿ ಹಂದಾಡಿ ಉಪಸ್ಥಿತರಿದ್ದರು.
ಜಿಲ್ಲಾ ಸವಿತಾ ಸಮಾಜ ಪ್ರಧಾನ ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲು ಸ್ವಾಗತಿಸಿದರು. ರಾಜು ಭಂಡಾರಿ ಕಿನ್ನಿಮುಲ್ಕಿ ವಂದಿಸಿದರು. ಮಂಜು ನಾಥ್ ಭಂಡಾರಿ ಪಡುಕೆರೆ ಕಾರ್ಯಕ್ರಮ ನಿರೂಪಿಸಿದರು.