ಕಾರು ಢಿಕ್ಕಿ: ಸೈಕಲ್ ಸವಾರ ಮೃತ್ಯು

Update: 2021-07-28 15:48 GMT

ಕುಂದಾಪುರ, ಜು. 28: ಕಾರು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟ ಘಟನೆ ಹೆಮ್ಮಾಡಿ ಹಾಗೂ ತಲ್ಲೂರು ನಡುವಿನ ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ 10.30ರ ಸುಮಾರಿಗೆ ನಡೆದಿದೆ.

ಮೃತರನ್ನು ಸ್ಥಳೀಯ ಸಂತೋಷ್ ನಗರದ ನಿವಾಸಿ ರಾಮ ಕುಲಾಲ್ (52) ಎಂದು ಗುರುತಿಸಲಾಗಿದೆ. ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು, ಸಂತೋಷನಗರ ಕಡೆಯಿಂದ ರಾಮ ಕುಲಾಲ್ ಸವಾರಿ ಮಾಡಿಕೊಂಡು ಬರುತ್ತಿದ್ದ ಸೈಕಲ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ರಸ್ತೆಗೆ ಬಿದ್ದು ಗಾಯಗೊಂಡ ರಾಮ ಕುಲಾಲ್ ಅವರನ್ನು ಗಂಗೊಳ್ಳಿ ಆಪತ್ಭಾಂದವ ಆಂಬ್ಯುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಕುಂದಾಪುರ ಆಸ್ಪತ್ರೆಗೆ ಸಾಗಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರು ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News