ಜು.30: ವಿದ್ಯುತ್ ವ್ಯತ್ಯಯ

Update: 2021-07-28 16:53 GMT

ಮಂಗಳೂರು, ಜು.28: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11 ಕೆವಿ ಮಾರ್ಕೆಟ್ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕೈಗೊಂಡ ಕಾರಣ ಜು.30ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಲೇಡಿಗೋಷನ್ ಆಸ್ಪತ್ರೆ, ಸೆಂಟ್ರಲ್ ಮಾರ್ಕೆಟ್, ಶಾಂತದುರ್ಗಾ, ಜಿಎಚ್‌ಎಸ್ ರೋಡ್, ಪಿ.ಎಂ. ರಾವ್‌ರೋಡ್, ಜುವೆಲ್ಲರಿ ರೋಡ್, ನಂದಾದೀಪ ರಸ್ತೆ, ಜೋಡುಮಠ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News