ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

Update: 2021-07-28 17:37 GMT

ಬೆಂಗಳೂರು, ಜು.28: ಕೊರೋನ ಸೋಂಕಿನಿಂದಾಗಿ ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತು ಮನೆ ಮನೆ ಸಮೀಕ್ಷೆ ನಡೆಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶಿಸಿದೆ.

ಈ ಸಂಬಂಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ.

ಗ್ರಾಮೀಣ ಭಾಗದ 3 ರಿಂದ 6 ವರ್ಷದ ಒಳಗಿನ 1,26,245 ಮಕ್ಕಳು, 6 ರಿಂದ 18 ವರ್ಷದ ಒಳಗಿನ 33,344 ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ನಗರಗಳಲ್ಲಿ 6 ರಿಂದ 18 ವರ್ಷದ 8,718 ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮೀಕ್ಷೆಯನ್ನೇ ನಡೆಸಲಾಗಿಲ್ಲ ಎಂದು ನ್ಯಾಯಪೀಠಕ್ಕೆ ಅಮಿಕಸ್ ಕ್ಯೂರಿ ಕೆ.ಎನ್.ಫಣೀಂದ್ರ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News