ಕೊವಿಡ್ ಚಿಕಿತ್ಸೆಗೆ ದುಬಾರಿ ಶುಲ್ಕ ವಸೂಲಿ: ದೂರು ಪರಿಹಾರ ಸಮಿತಿ ರಚನೆಗೆ ಹೈಕೋರ್ಟ್ ಸೂಚನೆ

Update: 2021-07-28 17:39 GMT

ಬೆಂಗಳೂರು, ಜು.28: ಕೋವಿಡ್-19 ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ದುಬಾರಿ ಶುಲ್ಕ ಪಡೆಯುತ್ತಿರುವ ಹಿನ್ನೆಲೆಯಲ್ಲಿ ದೂರು ಪರಿಹಾರ ಸಮಿತಿ ರಚಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ.

ಈ ಸಂಬಂಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಸೂಚನೆ ನೀಡಿದೆ. ವಕೀಲ ಶ್ರೀಧರ್ ಪ್ರಭು ಅವರು ವಾದಿಸಿ, ಸರಕಾರಿ ಕೋಟಾದ ಬೆಡ್‌ಗಳಿಗೂ ಶುಲ್ಕ ವಸೂಲಿ ಮಾಡಲಾಗಿದೆ. ಹೀಗೆ ಶುಲ್ಕ ವಸೂಲಿ ಬಗ್ಗೆ ಹಲವು ದೂರುಗಳು ಬಂದಿವೆ ಎಂದು ಪೀಠಕ್ಕೆ ಮಾಹಿತಿ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News