ಬ್ಯಾಡ್ಮಿಂಟನ್ : ಪಿ.ವಿ. ಸಿಂಧು ಕ್ವಾರ್ಟರ್ ಫೈನಲ್ ಗೆ ಲಗ್ಗೆ

Update: 2021-07-29 05:37 GMT

ಟೋಕಿಯೊ: ಭಾರತದ ಬ್ಯಾಡ್ಮಿಂಟನ್ ಸ್ಟಾರ್ ಪಿ.ವಿ. ಸಿಂಧು ಟೋಕಿಯೊ ಒಲಿಂಪಿಕ್ಸ್ ನ ಮಹಿಳೆಯರ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ಸ್ಥಾನ  ಪಡೆದಿದ್ದಾರೆ.

ಗುರುವಾರ ನಡೆದ ಪ್ರಿ-ಕ್ವಾರ್ಟರ್ ಫೈನಲ್ ನಲ್ಲಿ ಸಿಂಧು ಅವರು ಡೆನ್ಮಾರ್ಕ್ ನ ಮಿಯಾ ಬ್ಲಿಚ್ ಫೆಲ್ಟ್ ಅವರನ್ನು 21-15, 21-13  ಅಂತರದಿಂದ ಮಣಿಸಿದರು.

ರಿಯೊ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ವಿಜೇತೆ ಸಿಂಧು ಅವರು ಗೇಮ್ಸ್ ನಲ್ಲಿ ಎರಡನೇ ಬಾರಿ ಪದಕ ಗೆಲ್ಲಲು ಇನ್ನೆರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ  ಅಗತ್ಯವಿದೆ.

ಸಿಂಧು ಅವರು ಕ್ವಾರ್ಟರ್ ಫೈನಲ್ ನಲ್ಲಿ ಜಪಾನ್ ನ ಅಕಾನೆ ಯಮಗುಚಿ ಅವರನ್ನು ಎದುರಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News