ಅಂಬ್ಲಮೊಗರು : ಗ್ರಾಮ ಸಹಾಯಕ ನೇಣು ಬಿಗಿದು ಆತ್ಮಹತ್ಯೆ

Update: 2021-07-29 10:41 GMT

ಕೊಣಾಜೆ : ಅಂಬ್ಲ ಮೊಗರು ಗ್ರಾಮಪಂಚಾಯತ್ ಗ್ರಾಮ ಸಹಾಯಕ (ಉಗ್ರಾಣಿ) ಕಾರ್ಯನಿರ್ವಹಿಸುತ್ತಿದ್ದ ಯುವಕನೋರ್ವ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಗುರುವಾರ ನಡೆದಿದೆ.

ಅಂಬ್ಲ ಮೊಗರುವಿನ ಪಡ್ಯಾರ ಮನೆ ಗುತ್ತಿನ ನಿತಿನ್ ಶೆಟ್ಟಿ (34) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಕಳೆದ ಹಲವು ವರ್ಷಗಳಿಂದ ನಿತಿನ್ ಅಂಬ್ಲಮೊಗರು ಗ್ರಾಮ ಪಂಚಾಯತ್ ನಲ್ಲಿ ಗ್ರಾಮಕರಣಿಕರ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು.
ನಿತಿನ್ ಅವರು ಮೂರು ವರ್ಷದ ಹಿಂದಷ್ಟೆ ಮದುವೆಯಾಗಿದ್ದು ಇಂದು ಬೆಳಗ್ಗೆ ಪತ್ನಿಯನ್ನು ದ್ವಿಚಕ್ರ ವಾಹನದಲ್ಲಿ ಕುತ್ತಾರಿನವರೆಗೆ ಕೆಲಸಕ್ಕೆ ಬಿಟ್ಟು ಬಂದಿದ್ದರು. ಬಳಿಕ ಮನೆಗೆ ಮರಳಿದ ನಿತಿನ್ ರೂಮಿನೊಳಗೆ ಹೋಗಿದ್ದು, ಹೊರಗೆ ಬರದೇ ಇದ್ದಾಗ ಅನುಮಾನಗೊಂಡ ಅವರ ತಾಯಿ ರೂಮಿನೊಳಗೆ ಹೋದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ.

ಕೊಣಾಜೆ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News