ಕೆ.ಎಸ್. ಈಶ್ವರಪ್ಪಗೆ ಡಿಸಿಎಂ ಸ್ಥಾನ ನೀಡುವಂತೆ ಕರ್ನಾಟಕ ತಮಿಳು ಸಂಘಟನೆಗಳ ಒಕ್ಕೂಟ ಒತ್ತಾಯ

Update: 2021-07-29 13:31 GMT

ಶಿವಮೊಗ್ಗ,ಜು.29: ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪ ರಾಜ್ಯದಲ್ಲಿ ಬಿಜೆಪಿ ಸಂಘಟಕರಾಗಿ ಪಕ್ಷದ ಬೆಳೆಸಲು ಕಾರಣರಾಗಿದ್ದು, ಸಚಿವರಾಗಿ ಕೂಡ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಆದ್ದರಿಂದ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕರ್ನಾಟಕ ತಮಿಳು ಸಂಘಟನೆಗಳ ಒಕ್ಕೂಟ ಬಿಜೆಪಿ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದೆ.

ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಎರಡು ಬಾರಿ, ಉಪ ಮುಖ್ಯಮಂತ್ರಿಯಾಗಿ ಒಂದು ಬಾರಿ ಹಲವು ಪ್ರಮುಖ ಇಲಾಖೆಗಳ ಸಚಿವರಾಗಿ ಜಿಲ್ಲೆಯ ಅಭಿವೃದ್ಧಿಯ ಕಾರ್ಯಗಳಿಗೆ ಅವಿರತವಾಗಿ ಶ್ರಮಿಸಿದ ಅತ್ಯಂತ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ಯಾವುದೇ ಕಾರಣಕ್ಕೂ ನಿರಾಶೆ ಮಾಡದೇ, ಸ್ಥಾನ ವಂಚನೆ ಮಾಡದೇ ಗೌರವದಿಂದ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಪ್ರಮುಖ ಸಚಿವ ಸ್ಥಾನ ನೀಡಬೇಕೆಂದು ಒಕ್ಕೂಟದ ಅಧ್ಯಕ್ಷ ಎನ್. ಮಂಜುನಾಥ್ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದ ಹಲವಾರು ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸ್ಪಂದಿಸಿದ ಕೆ.ಎಸ್.ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಮಾರ್ ಕಟೀಲ್ ಅವರಿಗೆ ಮನವಿ ಮಾಡಿಕೊಂಡರು.
ಕಳೆದ 3ದಶಕಗಳಿಂದಲೂ ಪಕ್ಷದ ಸಂಘಟನೆಯಲ್ಲಿ ತೊಡಗಿರುವ ಹಾಗೂ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಅನುಭವವಿರುವ ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಮನವಿ ಮಾಡಿಕೊಂಡರು.

ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಪ್ರಮುಖರಾದ ಎಂ.ಪಿ. ಸಂಪತ್, ಡಿ. ರಾಜಶೇಖರಪ್ಪ, ಎಂ. ಭೂಪಾಲ್, ಎಸ್. ಮಂಜುನಾಥ್, ಸಿ. ದಂಡಪಾಣಿ, ಪಿ. ಸುಬ್ರಮಣಿ, ಮಾಣಿಕ್ಯಂ ಮೊದಲಿಯಾರ್, ಎ. ಮೂರ್ತಿ ಮೊದಲಾದವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News