ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2021-07-29 14:30 GMT

ಉಡುಪಿ, ಜು.29: ಪ್ರಸಕ್ತ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಸಾಂಸ್ಕೃತಿಕ, ಕಲೆ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ ಮಾಡಿರುವ 5ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರತಿ ಪ್ರತಿಭಾ ಕ್ಷೇತ್ರದಿಂದ ಇಬ್ಬರಂತೆ ಒಟ್ಟು 8 ಮಕ್ಕಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿ ಮಗುವಿಗೆ ತಲಾ 10,000 ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ.

ಮಕ್ಕಳ ಸಾಧನೆ ಕುರಿತು ಪೂರಕ ದಾಖಲೆಗಳನ್ನು ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ:0820-2574978/ 2574972 ಅನ್ನು ಸಂಪರ್ಕಿಸುವಂತೆ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News