×
Ad

ಮುಡಿಪು: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Update: 2021-07-29 21:24 IST

ಕೊಣಾಜೆ:  ಮುಡಿಪು ಬಳಿ ಸ್ಕೂಟರ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ್ದು, ಈ ಸಂದರ್ಭ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಬಸ್ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.

ಮೃತನನ್ನು  ಉಪ್ಪಳ ಮೂಲದ ಜೌಹಾರ್ (20) ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿಯಾಗಿದ್ದು, ಮುಡಿಪು ಸಮೀಪದ ಸಂಬಂಧಿಕರ ಮನೆಗೆಂದು ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈತ ಬಾಳೆಪುಣಿ ಕಡೆಯಿಂದ ಮುಡಿಪು ಕಡೆಗೆ ಹೋಗುತ್ತಿದ್ದ ವೇಳೆ ಮುಡಿಪು ಪೆಟ್ರೋಲ್ ಪಂಪು ಬಳಿ  ಅಪಘಾತ ಸಂಭವಿಸಿದೆ. ಸ್ಕೂಟರ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಸ್ಕೂಟರ್ ಸವಾರ ಫುಟ್ ಪಾತ್ ಗೆ ಎಸೆಯಲ್ಪಟ್ಟರೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟ ಕಾರಣ ಅದೇ ವೇಳೆ ಬಂದ ಬಸ್ ನಡಿಗೆ ಬಿದ್ದು ಸವಾರ ಕೊನೆಯುಸಿರೆಳೆದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಥಳಕ್ಕೆ ಟ್ರಾಫಿಕ್  ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News