ಶಿವಮೊಗ್ಗ: ಗಾಂಜಾ ಮಾರಾಟ, ಓರ್ವನ ಬಂಧನ

Update: 2021-07-29 16:12 GMT

ಶಿವಮೊಗ್ಗ(ಜು.29): ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದಲ್ಲಿಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬಳ್ಳೂರು ಗ್ರಾಮದ ಲೋಕೇಶ್‌ ನಾಯ್ಕ್‌ (53) ಬಂಧಿತ ಆರೋಪಿ. ಈತನಿಂದ ಅಂದಾಜು 10,000 ರೂ. ಮೌಲ್ಯದ ಒಟ್ಟು 475 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರೋಪಿ ವಿರುದ್ಧ ಎನ್‌ಡಿಪಿಎಸ್‌ ಕಾಯಿದೆ ಅಡಿ ಶಿಕಾರಿಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News