ರಾಜ್ಯದಲ್ಲಿ ಜು.31ವರೆಗೂ ವ್ಯಾಪಕ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Update: 2021-07-29 16:38 GMT

ಬೆಂಗಳೂರು, ಜು.29: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆಗಳಿದ್ದು, ಪರಿಣಾಮ ರಾಜ್ಯದ ಹಲವೆಡೆ ಜುಲೈ 31ರವರೆಗೆ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಜು.30 ಮತ್ತು 31ರಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಾತ್ರ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಮುಂದಿನ ಎರಡು ದಿನ ನಗರ ಸೇರಿದಂತೆ ಸುತ್ತಮುತ್ತಲ ಕೆಲವೆಡೆ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 29 ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News