×
Ad

ಕಾರವಾರ ಬಂದರು ವಿಸ್ತರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

Update: 2021-07-29 22:49 IST

ಬೆಂಗಳೂರು, ಜು.29: ಕಾರವಾರ ವಾಣಿಜ್ಯ ಬಂದರು ವಿಸ್ತರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿ, ಮಹತ್ವದ ಆದೇಶ ಪ್ರಕಟಿಸಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಹತ್ವದ ತೀರ್ಪು ಪ್ರಕಟಿಸಿದೆ. ವಿಚಾರಣೆ ನಡೆಸಿದ ಪೀಠ, ಮೀನುಗಾರರ ಅರ್ಜಿ ತಿರಸ್ಕರಿಸಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಪಡೆದು ಕಾಮಗಾರಿ ಪ್ರಾರಂಭಿಸಬಹುದು ಎಂದು ಕರ್ನಾಟಕ ರಾಜ್ಯ ಮೆರಿಟೈಮ್ ಬೋರ್ಡ್ ಗೆ ಸೂಚಿಸಿದೆ.

ಸಾಗರ ಮಾಲಾ ಯೋಜನೆಯಲ್ಲಿ 274 ಕೋಟಿ ವೆಚ್ಚದಲ್ಲಿ ಬೈತಖೋಲ್ ವಾಣಿಜ್ಯ ಬಂದರಿನ ಕಾಮಗಾರಿಯನ್ನು 2019ರಲ್ಲಿ ಪ್ರಾರಂಭಿಸಲಾಗಿತ್ತು. ಅದನ್ನು ವಿರೋಧಿಸಿ ಬೈತಖೋಲ್ ಮೀನುಗಾರರ ಸಂಘಟನೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. 2020 ರಲ್ಲಿ ಹೈಕೋರ್ಟ್ ಕಾಮಗಾರಿಗೆ ತಡೆ ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News