×
Ad

ಶಿವಮೊಗ್ಗ: ಬೈಕ್ ಗೆ ಢಿಕ್ಕಿಯಾಗುವುದನ್ನು ತಪ್ಪಿಸುವ ಯತ್ನದಲ್ಲಿ ಕೆರೆಗೆ ಉರುಳಿದ ಕೆಎಸ್ಸಾರ್ಟಿಸಿ ಬಸ್

Update: 2021-07-30 11:43 IST

ಶಿವಮೊಗ್ಗ : ಬೈಕಿಗೆ ಢಿಕ್ಕಿಯಾಗುವುದನ್ನು ತಪ್ಪಿಸುವ ಯತ್ನದಲ್ಲಿ ಕೆಎಸ್ಸಾರ್ಟಿಸಿ ಬಸ್ಸೊಂದು ಕೆರೆಗೆ ಉರುಳಿದ ಘಟನೆ ಸಾಗರ ತಾಲೂಕಿನ ಉಳ್ಳೂರು ಕ್ರಾಸ್ ಬಳಿ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರರಾದ ಪ್ರಜ್ವಲ್ ಮತ್ತು ದೀಪಕ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಬಸ್ಸಿನಲ್ಲಿದ್ದ  ಸುಮಾರು 27 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿರುವುದಾಗಿ ವರದಿಯಾಗಿದೆ. ಬಸ್ಸಿನಲ್ಲಿದ್ದ ಗಾಯಾಳುಗಳನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಗರದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಎದುರಿನಿಂದ ಬರುತ್ತಿದ್ದ ಬೈಕಿಗೆ ಢಿಕ್ಕಿಯಾವುದನ್ನು ತಪ್ಪಿಸಲು ಯತ್ನಿಸಿ ಬಸ್ ನೇರವಾಗಿ ಕಾಸ್ಪಾಡಿ ಕೆರೆಗೆ ಉರುಳಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. 

 ಈ ಬಗ್ಗೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News