×
Ad

‘ಪತ್ರಿಕಾ ಭವನ ಟ್ರಸ್ಟ್ ಮಂಗಳೂರು’ ಪದಾಧಿಕಾರಿಗಳ ಆಯ್ಕೆ

Update: 2021-07-30 16:45 IST
ರಾಮಕೃಷ್ಣ ಆರ್., ವೇಣು ವಿನೋದ್, ಹರ್ಷ 

ಮಂಗಳೂರು, ಜು.30: ಪತ್ರಿಕಾ ಭವನ ಟ್ರಸ್ಟ್ ಮಂಗಳೂರು ಇದರ ನೂತನ ಅಧ್ಯಕ್ಷರಾಗಿ ರಾಮಕೃಷ್ಣ ಆರ್. (ಸಂಯುಕ್ತ ಕರ್ನಾಟಕ) ಮುಂದಿನ ಮೂರು ವರ್ಷದ ಅವಧಿಗೆ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ವೇಣು ವಿನೋದ್ (ವಿಜಯವಾಣಿ) ಹಾಗೂ ಕೋಶಾಧಿಕಾರಿಯಾಗಿ ಹರ್ಷ (ಡೆಕ್ಕನ್ ಹೆರಾಲ್ಡ್) ಆಯ್ಕೆಯಾಗಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಟ್ರಸ್ಟ್ನ ಅಧ್ಯಕ್ಷ ಆನಂದ ಶೆಟ್ಟಿಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಕೋವಿಡ್ -19 ಸಂದರ್ಭದಲ್ಲಿ ಪತ್ರಿಕಾಭವನ ಟ್ರಸ್ಟ್ ವತಿಯಿಂದ 2020ನೇ ಸಾಲಿನಲ್ಲಿ ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ 246 ಸದಸ್ಯರಿಗೆ 2,80,088 ರೂ.ಮೊತ್ತದ ಅಕ್ಕಿ ಮತ್ತು ದಿನಸಿ ಸಾಮಗ್ರಿಗಳನ್ನು ವಿತರಿಸಲಾಗಿದೆ. 2021ನೇ ಸಾಲಿನಲ್ಲಿ 311 ಪತ್ರಕರ್ತರಿಗೆ 2,15,110 ರೂ.ಮೊತ್ತದ ಅಕ್ಕಿ ಕಿಟ್‌ಗಳನ್ನು ಟ್ರಸ್ಟ್ನಿಂದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮೂಲಕ ವಿತರಿಸಲಾಗಿದೆ ಎಂದು ಆನಂದ ಶೆಟ್ಟಿ ತಿಳಿಸಿದರು.

ಟ್ರಸ್ಟ್ನ ಕೋಶಾಧಿಕಾರಿ ರವಿ ಪೊಸವಣಿಕೆ ಲೆಕ್ಕಪತ್ರ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಬಿ.ಎನ್. ವಂದಿಸಿದರು. ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಮತ್ತು ಟ್ರಸ್ಟಿ ಬಿ. ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News