ಸುಳ್ಯ: ತಾಲೂಕು ಪಂಚಾಯಿತಿ ವಿಶೇಷ ಸಾಮಾನ್ಯ ಸಭೆ

Update: 2021-07-30 14:27 GMT

ಸುಳ್ಯ: 2021-22 ನೇ ಸಾಲಿನ ವಿವಿಧ ಅನುದಾನದ ಕ್ರಿಯಾ ಯೋಜನೆ ರೂಪಿಸಲು ತಾಲೂಕು ಪಂಚಾಯತ್ ನ ವಿಶೇಷ ಸಾಮಾನ್ಯ ಸಭೆ ತಾಲೂಕು ಪಂಚಾಯಿತಿ ಪಯಸ್ವಿನಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. 

ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಗಾಯತ್ರಿ ಎನ್.ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2021ನೇ ಸಾಲಿನ ಜನವರಿ, ಫೆಬ್ರವರಿ, ಮಾರ್ಚ್ ತಿಂಗಳ ಲೆಕ್ಕಪತ್ರ ಹಾಗೂ 2020-21 ನೇ ಸಾಲಿನ ಲೆಕ್ಕ ಪತ್ರಗಳಿಗೆ ಅನುಮೋದನೆ ನೀಡಲಾಯಿತು. ತಾಲೂಕು ಪಂಚಾಯಿತಿ ಅಧೀನದ ವಿವಿಧ ಇಲಾಖೆಗಳ 2021-22ನೇ ಸಾಲಿನ ಲಿಂಕ್ ಡಾಕ್ಯುಮೆಂಟ್ ಅನುದಾನದ ಕ್ರಿಯಾ ಯೋಜನೆಯ ಕುರಿತು ಚರ್ಚಿಸಿ ಅನುಮೋದನೆ ನೀಡಲಾಯಿತು. ತಾಲೂಕು ಪಂಚಾಯಿತಿ 2021-22 ನೇ ಸಾಲಿನ ವಿವಿಧ ಯೋಜನೆಗಳ ಕ್ರಿಯಾ ಯೋಜನೆಗೆ ಸಭೆಯಲ್ಲಿ ಅನೋದನೆ ನೀಡಲಾಯಿತು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ ಹಾಗು ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಕುಡಿಯುವ ನೀರಿನ ಸಂಪರ್ಕ ನೀಡುವ ಕೇಂದ್ರ ಸರಕಾರದ ಜಲಜೀವನ್ ಯೋಜನೆಯಲ್ಲಿ ಫಲಾನುಭವಿಗಳ ಬೇಡಿಕೆ ಕಡಿಮೆ ಇದ್ದ ಕಾರಣ ಗುರಿ ಸಾಧಿಸಲಾಗಲಿಲ್ಲ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಅಂಗನವಾಡಿ ಮಕ್ಕಳ ಪೌಷ್ಠಿಕ ಆಹಾರ ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪವಾಗಿರುವಂತೆ ನಿಗಾ ವಹಿಸಿ ಎಂದು ಆಡಳಿತಾಧಿಕಾರಿ ಸೂಚನೆ ನೀಡಿದರು. ಸುಳ್ಯ ತಾಲೂಕು ಪಂಚಾಯಿತಿಗೆ ಅನಿಬರ್ಂಧಿತ ಅನುದಾನ ಎರಡು ಕೋಟಿ ರೂ. ಬಂದಿದ್ದು ಇದರಲ್ಲಿ ಶೇ.50 ರಷ್ಟನ್ನು ಶಿಕ್ಷಣ, ಕುಡಿಯುವ ನೀರು, ನೈರ್ಮಲ್ಯ, ಆರೋಗ್ಯ ಕ್ಷೇತ್ರಕ್ಕೆ ಬಳಸಬೇಕಾಗಿದೆ ಎಂಬ ನಿರ್ದೇಶನ ಇದೆ ಎಂದು ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ ಮಾಹಿತಿ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News