ಸುಳ್ಯ: ವಿಷ ಸೇವಿಸಿದ್ದ ಕೆ.ಎಫ್.ಡಿ.ಸಿ ಉದ್ಯೋಗಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Update: 2021-07-30 14:30 GMT

ಸುಳ್ಯ: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಸುಳ್ಯ ವಿಭಾಗದ ಫಾರೆಸ್ಟರ್ ಉಮೇಶ್ (35)ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಕಳೆದ ಶನಿವಾರ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ವೈದ್ಯರ ಸಲಹೆ ಮೇರೆಗೆ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೂ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಅವರು ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ಇನ್ನಷ್ಟೆ ತಿಳಿದುಬರಬೇಕಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News