ಪಡುಬಿದ್ರಿ ಸಿಎ ಬ್ಯಾಂಕ್‍ನಿಂದ ಆರೋಗ್ಯ ಕೇಂದ್ರಕ್ಕೆ ಇನ್ವರ್ಟರ್ ಕೊಡುಗೆ

Update: 2021-07-30 14:42 GMT

ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ವತಿಯಿಂದ ಪಡುಬಿದ್ರಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಒದಗಿಸಲಾದ ಇನ್ವರ್ಟರ್ ಸೌಲಭ್ಯವನ್ನು ಶುಕ್ರವಾರ ಉದ್ಘಾಟಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷ ಸುಧೀರ್ ಕುಮಾರ್ ಎರ್ಮಾಳು ಮಾತನಾಡಿ, ಕೊರೋನ ಅವಧಿಯಲ್ಲಿ ನಡೆದ ವ್ಯಾಕ್ಸಿನೇಷನ್ ಕಾರ್ಯಕ್ರಮದ ಸಂದರ್ಭದಲ್ಲಿ ವಿದ್ಯುತ್ ಇಲ್ಲದೇ ಆಸ್ಪತ್ರೆಯಲ್ಲಿ ಸಮಸ್ಯೆ ಉಂಟಾಗಿದ್ದು, ಇದನ್ನು ಗಮನಿಸಿ ಇನ್ವರ್ಟರ್ ನ್ನು ಕೊಡುಗೆ ರೂಪದಲ್ಲಿ ನೀಡಲಾಗುತ್ತಿದೆ ಎಂದರು.

ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜಶ್ರೀ ಕಿಣಿ ಮಾತನಾಡಿ, ಪದೇ ಪದೇ ವಿದ್ಯುತ್ ಕೈ ಕೊಡುತ್ತಿದ್ದು ಇದರಿಂದಾಗಿ ಕೊರೋನ ರೋಗಿಗಳಿಗೆ, ಮಕ್ಕಳಿಗೆ ಇಮ್ಯುನಿಟಿ ಸಂಬಂಧಿತ ಚಿಕಿತ್ಸೆಗಳನ್ನು ನೀಡಲು ಕಷ್ಟ ಸಾಧ್ಯವಾಗುತ್ತಿತ್ತು. ಇಂತಹ ಸಂದರ್ಭದಲ್ಲಿ ಪಡುಬಿದ್ರಿ ಸೊಸೈಟಿ ಸಮುದಾಯದ ಅಭಿವೃದ್ಧಿಗಾಗಿ ವಿಶೇಷ ಕೊಡುಗೆ ನೀಡಿರುವುದು ಮಾದರಿಯಾಗಿದೆ ಎಂದರು.

ಕೋಟ ವ್ಯವಸಾಯಿಕ ಸಹಕಾರಿ ಸಂಘದ ಅಧ್ಯಕ್ಷ ತಿಮ್ಮ ಪೂಜಾರಿ, ಕೋಟ ಸಹಕಾರಿ ವ್ಯವಸಾಯಿಕ ಸಂಘದ ಉಪಾಧ್ಯಕ್ಷ ರಾಜೀವ ದೇವಾಡಿಗ, ಸಿಇಒ ಶೋಭಾ, ಪಡುಬಿದ್ರಿ ಸೊಸೈಟಿಯ ಆಡಳಿತ ಮಂಡಳಿ ನಿರ್ದೇಶಕರು, ಸಿಬಂದಿಗಳು  ಉಪಸ್ಥಿತರಿದ್ದರು. 

ಪಡುಬಿದ್ರಿ ಸೊಸೈಟಿ ಅಧ್ಯಕ್ಷ ವೈ. ಸುಧೀರ್ ಕುಮಾರ್ ಸ್ವಾಗತಿಸಿದರು. ಉಪಾಧ್ಯಕ್ಷ ಗುರುರಾಜ ಪೂಜಾರಿ ವಂದಿಸಿದರು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಿಷ್ಮಿತಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News