ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಪ್ರಧಾನಿಗೆ ಸಿಎಂ ಬೊಮ್ಮಾಯಿ ಮನವಿ

Update: 2021-07-30 15:31 GMT

ಬೆಂಗಳೂರು, ಜು.30: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಜೊತೆಗೆ ಕಲಬುರಗಿಯ ಇಎಸ್‍ಐ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಪ್ರಾದೇಶಿಕ ಏಮ್ಸ್ ಮಾದರಿಯ ಸಂಸ್ಥೆಯನ್ನಾಗಿ ಉನ್ನತೀಕರಿಸುವಂತೆ ಕೋರಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರಿಗೆ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಅಭಿವೃದ್ಧಿಗೆ ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News