​ಉಡುಪಿ: ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ

Update: 2021-07-30 15:50 GMT

ಉಡುಪಿ, ಜು.30: ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲೆಯ ಕೊರಗ ಜನಾಂಗವೂ ಸೇರಿದಂತೆ ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ ಮಣಿಪಾಲದಲ್ಲಿರುವ ಉಡುಪಿ ಜಿಪಂ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.

ಸಭೆಯಲ್ಲಿ ವಿವಿಧ ಕೊರಗ ಸಂಘಟನೆಗಳು ಹಾಗೂ ಪರಿಶಿಷ್ಟ ಪಂಗಡಗಳ ವಿವಿಧ ಸಂಘಟನೆಗಳು ಮುಂದಿಟ್ಟ ದೂರು ಹಾಗೂ ಕುಂದುಕೊರತೆಗಳ ಪರಿಶೀಲನೆ ನಡೆಸಲಾಯಿತು. ಸಭೆಯಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರೂ ಪಾಲ್ಗೊಂಡಿದ್ದರು.

ಸಭೆಯಲ್ಲಿ ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ್ ಉಡುಪ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್.ಎಸ್.ನಾಗೂರ್, ಐಟಿಡಿಪಿ ಉಡುಪಿ ಯೋಜನಾ ಸಮನ್ವಯಾಧಿಕಾರಿ ದೂದ್ ಪೀರ್, ಜಿಪಂ ಯೋಜನಾ ನಿರ್ದೇಶಕ ಬಾಬು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News