​ವಿಕಲಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Update: 2021-07-30 16:37 GMT

ಉಡುಪಿ, ಜು.30: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲೆಯ ಅಂಗವಿಕಲರಿಗಾಗಿ ಸರಕಾರ ಅನುಷ್ಠಾನಗೊಳಿಸಿರುವ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪ್ರೋತ್ಸಾಹ ಧನ, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ಅಂಗವಿಕಲರ ದೈನಂದಿನ ಚಟುವಟಿಕೆಗಳಿಗೆ ಅಗತ್ಯವಿರುವ ಸಾಧನ ಸಲಕರಣೆ, ನಿವಾರಣಾ ಶಸ್ತ್ರಚಿಕಿತ್ಸೆಗೆ ವೈದ್ಯಕೀಯ ನೆರವು, ವಿಕಲಚೇತನರ ಬಸ್‌ಪಾಸ್, ಸ್ವಯಂ ಉದ್ಯೋಗಕ್ಕಾಗಿ ಶೇ. 50 ರಷ್ಟು ಬ್ಯಾಂಕ್ ಸಾಲ ಮತ್ತು ಶೇ. 50 ರಷ್ಟು ಸಬ್ಸಿಡಿ ಮೂಲಕ ಆಧಾರ ಸಾಲ ಯೋಜನೆ, ಯಂತ್ರಚಾಲಿತ ದ್ವಿಚಕ್ರ ವಾಹನ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ಅಂಧ ಮಹಿಳೆಗೆ ಜನಿಸುವ ಮೊದಲನೇ ಮತ್ತು ಎರಡನೇ ಮಗುನ ಪಾಲನೆಗಾಗಿ ಶಿಶುಪಾಲನಾ ಭತ್ಯೆ, ಶ್ರವಣ ದೋಷವುಳ್ಳ ವಿಕಲಚೇತನ ವ್ಯಕ್ತಿಗಳಿಗೆ ಹೊಲಿಗೆಯಂತ್ರ, ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್‌ಕಿಟ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸ್ಪರ್ಧಾಚೇತನ ಯೋಜನೆಗಳಿಗೆ ಷರತ್ತಿಗೊಳಪಟ್ಟು ಅಂಗವಿಕಲರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574810/811ನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿರಿ ರತ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News