ಇ-ಕೆವೈಸಿ ಮಾಡಿಸಿಕೊಳ್ಳಲು ಅಂತಿಮ ಅವಕಾ

Update: 2021-07-30 18:24 GMT

ಮಂಗಳೂರು ಜು.30:ರಾಜ್ಯ ಸರಕಾರದ ನಿರ್ದೇಶನದಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಲಾದ ಪಡಿತರ ಚೀಟಿಯ ಫಲಾನುಭವಿಗಳನ್ನು ಹೊರತು ಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿಯನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಆಗಸ್ಟ್ 1ನೆ ತಾರೀಖಿನಿಂದ 10ನೆ ತಾರೀಖಿನವರೆಗೆ ನಡೆಸಲಾಗುತ್ತಿದೆ. ಇದು ಕೊನೆಯ ಅವಕಾಶವಾಗಿದ್ದು, ಬಳಿಕ ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರವನ್ನು ತಡೆ ಹಿಡಿಯಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ನೀಡಬೇಕಾಗಿರುವುದರಿಂದ ಪಡಿತರ ಚೀಟಿಗಳಲ್ಲಿನ ಕುಟುಂಬದ ಮುಖ್ಯಸ್ಥ, ಸಂಬಂಧ, ಲಿಂಗ, ಜಾತಿ, ಎಲ್‌ಪಿಜಿ ವಿವರ, ಮೊಬೈಲ್ ಸಂಖ್ಯೆಯನ್ನು ಸಂಗ್ರಹಿಸಬೇಕಾಗಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳ (ಬಿಪಿಎಲ್) ಇ-ಕೆವೈಸಿ ನೀಡಲು ಆಧಾರ್‌ಕಾರ್ಡ್, ಎಲ್‌ಪಿಜಿ ದಾಖಲೆ, ಜಾತಿ ಪ್ರಮಾಣ ಪತ್ರ (ಇದ್ದಲ್ಲಿ), ಆದಾಯ ಪ್ರಮಾಣ ಪತ್ರ, ಎಂಡೋಸಲ್ಫಾನ್ ಪೀಡಿತರಂತಹ ವಿಶೇಷ ವರ್ಗದವರು ಹೊಂದಿರುವ ಧೃಢಪತ್ರಗಳಿದ್ದಲ್ಲಿ ಅವುಗಳೊಂದಿಗೆ ತಮಗೆ ಸಂಬಂಧಪಟ್ಟ ನ್ಯಾಯ ಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಸಬೇಕು.

2020ರ ಫೆಬ್ರವರಿ ನಂತರ ವಿತರಿಸಿರುವ ಹೊಸ ಹಾಗೂ ಜಿಎಸ್‌ಸಿ (ತಿದ್ದುಪಡಿ) ಮಾಡಲಾದ ಪಡಿತರ ಚೀಟಿಗಳನ್ನು ಬಿಟ್ಟು ಮೊದಲ ಹಂತದಲ್ಲಿ ಇ-ಕೆವೈಸಿ ಮಾಡದಿರುವ ಅಂತ್ಯೋದಯ, ಆದ್ಯತಾ (ಬಿಪಿಎಲ್) ಹಾಗೂ ಆದ್ಯತೇತರ (ಎಪಿಎಲ್)ಪಡಿತರ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಲೇಬೇಕಾಗಿದೆ. ಇ-ಕೆವೈಸಿ ನೀಡಲು ಯಾವುದೇ ಶುಲ್ಕವಿಲ್ಲ.

ಇ-ಕೆವೈಸಿ ಸಂಗ್ರಹಣೆಗೆ ಯಾರಾದರೂ ಹಣ ಕೇಳಿದಲ್ಲಿ ಅಥವಾ ದೂರುಗಳಿದ್ದರೆ ಅಥವಾ ಹೆಚ್ಚಿನ ಮಾಹಿತಿ ಬೇಕಾಗಿದಲ್ಲಿ ಸಂಬಂಧಪಟ್ಟ ತಾಲೂಕು ತಹಶೀಲ್ದಾರರು/ ಮಂಗಳೂರಿನ ಅನೌಪಚಾರಿಕ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಜಿಲ್ಲಾಧಿಕಾರಿಯ ಕಚೇರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News