ಉದ್ದಿಮೆಗಳನ್ನು ವಿಸ್ತರಿಸಿಕೊಳ್ಳಲು ಸರಕಾರದಿಂದ ಸಹಾಯಧನ

Update: 2021-07-30 18:28 GMT

ಮಂಗಳೂರು, ಜು.30: ಕಿರು ಆಹಾರ ಸಂಸ್ಕರಣೆ ಉದ್ದಿಮೆ ಸ್ಥಾಪಿಸಿಕೊಂಡು ಕಾರ್ಯನಿರ್ವಹಿಸುತ್ತಿರುವವರ ಉದ್ದಿಮೆಗಳನ್ನು ವಿಸ್ತರಿಸಿಕೊಳ್ಳಲು ಸರಕಾರದಿಂದ ಸಹಾಯಧನ ನೀಡಲಾಗುತ್ತಿದೆ.

ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಈ ಸೌಲಭ್ಯ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ತೋಟಗಾರಿಕೆ ಉತ್ಪನ್ನಗಳನ್ನು ಬಳಸಿಕೊಂಡು ಉದ್ದಿಮೆ ನಿರ್ವಹಿಸುತ್ತಿರುವ ಗೇರು ಸಂಸ್ಕರಣೆ, ತೆಂಗಿನ ಎಣ್ಣೆಯ ಮಿಲ್‌ಗಳು, ಉಪ್ಪಿನಕಾಯಿ ತಯಾರಿ ಘಟಕ, ಜ್ಯೂಸ್ ತಯಾರಿ ಘಟಕ, ಸಾಂಬಾರು ಪುಡಿ ತಯಾರಿ ಘಟಕ, ಹಲಸಿನ ಹಪ್ಪಳ, ಬಾಳೆಕಾಯಿ ಚಿಪ್ಸ್ ಹಾಗೂ ಇತರೆ ಉತ್ಪನ್ನ ತಯಾರಿ ಘಟಕಗಳಿಗೆ ಈ ಯೋಜನೆಯಲ್ಲಿರುವ ವಿಪುಲ ಅವಕಾಶಗಳ ಕುರಿತು ಮಾಹಿತಿ ಶಿಬಿರ ಹಾಗೂ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಯೋಜನೆಯಡಿ ಉದ್ದಿಮೆದಾರರಿಗೆ ಅಗತ್ಯ ಸಂಪನ್ಮೂಲ ಮಾಹಿತಿ ಹಾಗೂ ಯೋಜನಾ ವರದಿ ತಯಾರಿಗೆ ನೆರವು ನೀಡಲಾಗುವುದು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News