ಉಡುಪಿ : ಕೋವಿಡ್‌ಗೆ 148 ಮಂದಿ ಪಾಸಿಟಿವ್, ಮಹಿಳೆ ಬಲಿ

Update: 2021-07-31 14:48 GMT

ಉಡುಪಿ, ಜು.31: ಜಿಲ್ಲೆಯಲ್ಲಿ ಶನಿವಾರ ಒಟ್ಟು 148 ಮಂದಿ ಕೋವಿಡ್‌ಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ 71 ವರ್ಷ ಪ್ರಾಯದ ವೃದ್ಧೆ ಮೃತಪಟ್ಟರೆ, 88 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲೀಗ 1105 ಮಂದಿ ಸೋಂಕಿಗೆ ಸಕ್ರಿಯರಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಉಡುಪಿ ತಾಲೂಕಿನ 71 ವರ್ಷ ಪ್ರಾಯದ ಮಹಿಳೆಯೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನ್ಯುಮೋನಿಯಾ, ತೀವ್ರ ಉಸಿರಾಟ ತೊಂದರೆ ಹಾಗೂ ಕೋವಿಡ್ ಗುಣಲಕ್ಷಣದೊಂದಿಗೆ ಜು.28ರಂದು ಆಸ್ಪತ್ರೆಗೆ ದಾಖಲಾದ ಇವರು ಅದೇ ದಿನ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಬಲಿಯಾದವರ ಸಂಖ್ಯೆ 416ಕ್ಕೇರಿದೆ.

ದಿನದಲ್ಲಿ ಕೊರೋನ ಪಾಸಿಟಿವ್ ದೃಢಪಟ್ಟ 148 ಮಂದಿಯಲ್ಲಿ 61 ಮಂದಿ ಪುರುಷರು ಹಾಗೂ 87 ಮಂದಿ ಮಹಿಳೆಯರು. ಇವರಲ್ಲಿ 74 ಮಂದಿ ಉಡುಪಿ ತಾಲೂಕು, 25 ಮಂದಿ ಕುಂದಾಪುರ ಹಾಗೂ 47 ಮಂದಿ ಕಾರ್ಕಳ ತಾಲೂಕಿ ನವರು. ಹೊರಜಿಲ್ಲೆಗಳ ಇಬ್ಬರೂ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. 148 ಮಂದಿಯಲ್ಲಿ 18 ಮಂದಿಯನ್ನು ಕೋವಿಡ್ ಆಸ್ಪತ್ರೆ ಹಾಗೂ 130 ಮಂದಿ ಯನ್ನು ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶುಕ್ರವಾರ 88 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 68,255ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3992 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಜಿಲ್ಲೆ ಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 69,776ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 7,82,870 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

ಒಬ್ಬನಲ್ಲಿ ಸೋಂಕು:   ಹೊರಜಿಲ್ಲೆಯಿಂದ ಬಂದ ಒಬ್ಬ ರೋಗಿಯಲ್ಲಿ ಇಂದು ಬ್ಲಾಕ್ ಫಂಗಸ್ ಸೋಂಕು ಪತ್ತೆಯಾಗಿದ್ದು, ಇದೀಗ ಜಿಲ್ಲೆಯಲ್ಲಿ ಒಟ್ಟು ಏಳು ಮಂದಿ ಮಣಿಪಾಲದ ಕೆಎಂಸಿ ಹಾಗೂ ಉಡುಪಿಯ ಆದರ್ಶ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

897 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಶನಿವಾರ 897 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಇವರಲ್ಲಿ 841 ಮಂದಿ ಮೊದಲ ಹಾಗೂ 56 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ. ಇಂದು 18ರಿಂದ 44 ವರ್ಷದೊಳಗಿನ 676 ಮಂದಿ ಹಾಗೂ 45 ವರ್ಷ ಮೇಲಿನ 221 ಮಂದಿ ಲಸಿಕೆಯನ್ನು ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News