​ದ.ಕ. ಜಿಲ್ಲೆ : ಕೋವಿಡ್‌ಗೆ ಏಳು ಬಲಿ; 365 ಮಂದಿಗೆ ಕೊರೋನ ಸೋಂಕು

Update: 2021-07-31 15:02 GMT

ಮಂಗಳೂರು, ಜು.31: ದ.ಕ. ಜಿಲ್ಲೆಯಲ್ಲಿ ಶನಿವಾರ ಕೋವಿಡ್‌ನಿಂದಾಗಿ ಏಳು ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ, ಹೊಸದಾಗಿ 365 ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಜಿಲ್ಲೆಯಲ್ಲಿ ಶನಿವಾರ 243 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ನಿಂದಾಗಿ ಜಿಲ್ಲೆಯಲ್ಲಿ ಒಟ್ಟು 1,424 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 1,00,370 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 96,143 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2,803 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News