ಬ್ರಹ್ಮಾವರ; ಮನೆ, ದೇವಸ್ಥಾನದಲ್ಲಿ ಕಳವು ಪ್ರಕರಣ: ನಾಲ್ವರು ಆರೋಪಿಗಳ ಬಂಧನ

Update: 2021-07-31 15:39 GMT

ಬ್ರಹ್ಮಾವರ, ಜು.31: ದೇವಸ್ಥಾನ ಹಾಗೂ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ಕು ಮಂದಿ ಆರೋಪಿ ಗಳನ್ನು ಜು.30ರಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕಲ್ಲುಕಟ್ಟೆಯ ಗೋಪಾಲ (26), ಕೊಕ್ಕರ್ಣೆ ಜಾರುಜೆಡ್ಡುವಿನ ಅರುಣ್(26), ರವಿ ಕುಮಾರ್(28), ಸಾಸ್ತಾನ ಗುಂಡ್ಮಿಯ ರಜಾಕ್(41) ಬಂಧಿತ ಆರೋಪಿಗಳು.

ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ನೆಂಚಾರು ಗ್ರಾಮದ ಕರಬರಬೆಟ್ಟು ಎಂಬಲ್ಲಿ ನೀಲಕಂಠ ಕರಬ ಎಂಬವರ ಮನೆಗೆ ನುಗ್ಗಿದ ಕಳ್ಳರು 38,200 ರೂ. ಮೌಲ್ಯದ ಸೊತ್ತುಗಳನ್ನು ಹಾಗೂ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗುಂಜೆ ಗ್ರಾಮದ ಹ್ರಬ್ಬಾಡಿ ಮೂಲ ಜಟ್ಟಿಗ ಮತ್ತು ಬ್ರಹ್ಮ ದೈವಸ್ಥಾನದ ಕಂಚಿನ ಘಂಟೆಗಳು ಮತ್ತು ತೂಕಳಕಗಳು ಕಳವು ಆಗಿರುವ ಬಗ್ಗೆ ಜು.29ರಂದು ಕೋಟ ಮತ್ತು ಬ್ರಹ್ಮಾವರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ನೇತೃತ್ವದಲ್ಲಿ ಕೋಟ ಎಸ್ಸೈ ಸಂತೋಷ್ ಬಿ.ಪಿ., ಅಪರಾಧ ವಿಭಾಗದ ಎಸ್ಸೈ ಪುಷ್ಪಾ, ಪ್ರೊಬೆಷನರಿ ಎಎಸ್ಸೈ ಭರತೇಶ್, ಸಿಬ್ಬಂದಿಗಳಾದ ಸುರೇಶ್ ಶೆಟ್ಟಿ, ರಾಜು, ಸುರೇಶ್, ರಾಮ ದೇವಾಡಿಗ, ಜಯರಾಮ, ಪ್ರಕಾಶ್, ಕೃಷ್ಣ, ವಿಕ್ರಮ್, ಮಂಜುನಾಥ್ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ, ಕಳವು ಮಾಡಿದ ದೇವಸ್ಥಾನದ ಘಂಟೆಗಳು, ದೀಪಗಳು ಹಾಗೂ ಇತರ ಪೂಜಾ ಸೊತ್ತುಗಳನ್ನು ವಶಪಡಿಸಿಕೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News