ಹುತಾತ್ಮ ಆರೋಗ್ಯ ಕಾರ್ಯಕರ್ತರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ

Update: 2021-07-31 18:08 GMT

ಬೆಂಗಳೂರು, ಜು. 31: ಕೋವಿಡ್ ಸಂದರ್ಭದಲ್ಲಿ ಸೇವೆ ಸಲ್ಲಿಸುತ್ತಾ ಮೃತರಾದ ಆರೋಗ್ಯ ಕಾರ್ಯಕರ್ತರ ನಾಲ್ಕು ಮಕ್ಕಳಿಗೆ 2 ಲಕ್ಷ ರೂ.ವರೆಗೆ ವಿದ್ಯಾರ್ಥಿ ವೇತನ ಹಾಗೂ ಪದವೀಧರ ಮಕ್ಕಳಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಲಾಯಿತು. 

ಶನಿವಾರ ನಗರದ ಖಾಸಗಿ ಹೋಟೆಲ್‍ನಲ್ಲಿ ಕಾವೇರಿ ಆಸ್ಪತ್ರೆ ವತಿಯಿಂದ ಆಯೋಜಿಸಿದ್ದ ಕೃತಜ್ಞ ಸಮಾರೋಪ ಸಮಾರಂಭದಲ್ಲಿ ವಿತರಿಸಲಾಯಿತು. ಈ ವೇಳೆ ಮಾತನಾಡಿದ ಕಾವೇರಿ ಆಸ್ಪತ್ರೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ವಿಜಯಭಾಸ್ಕರನ್ ಮಾತನಾಡಿ, ಕೋವಿಡ್ ಸಂದರ್ಭದಲ್ಲಿಸೇವೆ ಸಲ್ಲಿಸುತ್ತಾ ಆರೋಗ್ಯ ಕ್ಷೇತ್ರದ ಪ್ರತಿನಿಧಿಗಳು ಮೃತರಾಗಿದ್ದಾರೆ. ಅವರನ್ನೇ ನಂಬಿದ ಕುಟುಂಬ ಅನಾಥವಾಗಿದೆ. ಈ ಉದ್ದೇಶದಿಂದ ಅವರ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವ ದೃಷ್ಟಿಯಿಂದ ನಾಲ್ಕು ಮಕ್ಕಳಿಗೆ 2 ಲಕ್ಷ ರೂ.ಗಳ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಜೊತೆಗೆ ಪಧವೀಧರ ಮಕ್ಕಳಿಗೆ 8 ಉದ್ಯೋಗ ಕೊಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು. 

ಆಸ್ಪತ್ರೆಗಳಿಗೆ ಪ್ರಶಸ್ತಿ ಪ್ರದಾನ: ಕೋವಿಡ್ ಸಂದರ್ಭದಲ್ಲಿ ಚಿಕಿತ್ಸಾ ವಿಧಾನದಲ್ಲಿ ನಾವೀನ್ಯತೆ ಅಳವಡಿಸಿಕೊಂಡ ಆಸ್ಪತ್ರೆಗಳನ್ನು ಗುರುತಿಸಿ ಇಂದು ಪ್ರಶಸ್ತಿ ನೀಡಲಾಗಿದೆ. ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ಬೆಸ್ಟ್ ಇನೋವೇಷನ್ ಪ್ರಶಸ್ತಿ ಪಡೆದುಕೊಂಡಿದೆ. ಪ್ರಶಸ್ತಿಯು 50 ಸಾವಿರ ರೂ. ಮೊತ್ತ ಒಳಗೊಂಡಿದೆ.

ಬೆಸ್ಟ್ ಕ್ಲಿನಿಕಲ್ ವಿಭಾಗದಲ್ಲಿ ಇಎಸ್‍ಐಸಿ ಆಸ್ಪತ್ರೆ ಹಾಗೂ ಕಿಮ್ಸ್ ಆಸ್ಪತ್ರೆಯು ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನವನ್ನು ಗೆದ್ದುಕೊಂಡಿದ್ದು, ತಲಾ 25 ಸಾವಿರ ಪ್ರಶಸ್ತಿ ಮೊತ್ತ ಇರಲಿದೆ. ಕಾವೇರಿ ಆಸ್ಪತ್ರೆ ಮತ್ತು ಸೇಂಟ್ ಫಿಲೋಮಿನಾ ಆಸ್ಪತ್ರೆ ರನ್ನರ್ ಅಪ್ ಮತ್ತು ಎರಡನೆ ರನ್ನರ್ ಅಪ್ ಸ್ಥಾನವನ್ನು ವೈದ್ಯಕೀಯೇತರ ವಿಭಾಗದಲ್ಲಿ ಪಡೆದುಕೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News